• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊಡಗು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಮಡಿಕೇರಿ, ನವೆಂಬರ್ 07; ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 8ರ ಸಂಜೆ 5.30ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ 1977 ರನ್ವಯ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ

ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿಗೆ ನವೆಂಬರ್ 8 ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಣಿಯಾಗಿರಬೇಕು.

ಕೆಎಸ್‌ಒಯು ನೇಮಕಾತಿ; 32 ಬೋಧಕ ಹುದ್ದೆಗಳಿಗೆ ಅರ್ಜಿ ಹಾಕಿಕೆಎಸ್‌ಒಯು ನೇಮಕಾತಿ; 32 ಬೋಧಕ ಹುದ್ದೆಗಳಿಗೆ ಅರ್ಜಿ ಹಾಕಿ

ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು.

ಗ್ರಾಮ ಲೆಕ್ಕಿಗರ ನೇಮಕಾತಿಗೆ ಒಪ್ಪಿಗೆ; ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಗ್ರಾಮ ಲೆಕ್ಕಿಗರ ನೇಮಕಾತಿಗೆ ಒಪ್ಪಿಗೆ; ಯಾವ ಜಿಲ್ಲೆಗೆ ಎಷ್ಟು ಹುದ್ದೆ?

ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರಬಾರದು ಎಂದು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿಗೆ ಹೆಸರು ನೋಂದಾವಣಿ ಮಾಡಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರ ನಡೆಯಲಿದೆ.

ಆಸಕ್ತರು ನವೆಂಬರ್ 12ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

ಸ್ವ ಉದ್ಯೋಗಕ್ಕೆ ಸಾಲ ಸೌಲಭ್ಯ; ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ 4ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಫ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ ರೂ. 1 ಕೋಟಿಯವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಉದ್ಯಮಿಗಳು ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳನ್ನು ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ 08272 225531 ಅನ್ನು ಸಂಪರ್ಕಿಸಬಹುದು.

ಅರ್ಜಿ ಆಹ್ವಾನ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶನದಂತೆ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಹಾಸನ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿಗಳ ಕಚೇರಿ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಕರೆದಿದೆ.

ಪಿಯುಸಿ ಪಾಸಾದ ಯುವಕ ಯುವತಿಯರಿಗೆ, Emergency Medical Technician-Basic, ಕೌಶಲ್ಯಾಧಾರಿತ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಪ್ರಕಟಣೆ ತಿಳಿಸಿದೆ.

ವೃತ್ತಿ ತರಬೇತಿಯು ಅಲ್ಪಾವಧಿಯದಾಗಿದ್ದು, ತರಬೇತಿಯನ್ನು ಜಿಲ್ಲಾ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರ/ ಖಾಸಗಿ ಆಸ್ಪತ್ರೆಗಳಲ್ಲಿ ನೀಡಬಹುದು. ಅರ್ಜಿ ಸಲ್ಲಿಸುವವರಿಗೆ 18 ರಿಂದ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೌಶಲಾಭಿವೃದ್ಧಿ ಕಚೇರಿ ಸಿಬ್ಬಂದಿಗಳ ಮೊಬೈಲ್‍ಗಳಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದು. ತರಬೇತಿಯು ನವೆಂಬರ್ 20ರಂದು ಪ್ರಾರಂಭವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು 8861646939. ಸಹಾಯಕ ನಿರ್ದೇಶಕರು 9844552919/ 7996662135. ಇಮೇಲ್ ವಿಳಾಸ dsdohsn18@gmail.com.

English summary
Apply for various post on Kodagu. Applications invited for the trainning for the compitative exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X