ಕೊಡಗು; ಕೆಲಸ ಖಾಲಿ ಇದೆ, ಫೆ.17ರೊಳಗೆ ಅರ್ಜಿ ಹಾಕಿ

ಮಡಿಕೇರಿ, ಫೆಬ್ರವರಿ 11: ಕೊಡಗು ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನ. ಸಂದರ್ಶನದ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.

ಕೇಂದ್ರ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಿವಿಧ ಹುದ್ದೆಯ ನೇಮಕಾತಿ ಮಾಡಲಾಗುತ್ತಿದೆ.

Apply For Various Post At Kodagu Till February 17

ಜಿಲ್ಲಾ ಮಿಷನ್ ಸಂಯೋಜಕರು, ಪಿಎಂಎಂವಿವೈ ಜಿಲ್ಲಾ ಸಂಯೋಜಕರು, ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕ ತಜ್ಞರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ನಿಗದಿಪಡಿಸಿ, ವಿವರಗಳನ್ನು ನೀಡಲಾಗಿದೆ.

ಹುದ್ದೆಗಳ ವಿವರಗಳು; ಜಿಲ್ಲಾ ಮಿಷನ್ ಸಂಯೋಜಕರು ಮತ್ತು ಪಿಎಂಎಂವಿವೈ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಮಾಜ ವಿಜ್ಞಾನದಲ್ಲಿ ಪದವಿ, ಲೈಫ್‌ಸೈನ್ಸ್‌, ನ್ಯೂಟ್ರೀಷನ್, ಮೆಡಿಷಿನ್, ಹೆಲ್ತ್ ಮ್ಯಾನೇಜ್‍ಮೆಂಟ್, ಸಾಮಾಜಿಕ ಕೆಲಸ, ರೂರಲ್ ಮ್ಯಾನೇಜ್‍ಮೆಂಟ್, 3 ವರ್ಷಗಳ ಅನುಭವ ಹೊಂದಿರಬೇಕು.

ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕ ತಜ್ಞರ ಹುದ್ದೆಗೆ ಎಕಾನಾಮಿಕ್ಸ್ ಪದವಿ, ಬ್ಯಾಂಕಿಂಗ್, ಮತ್ತಿತರ. ಪೋಸ್ಟ್ ಗ್ರ್ಯಾಜ್ಯುಯೇಟ್ ವಿದ್ಯಾರ್ಹತೆ ಹೊಂದಿರಬೇಕು. 3 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ಪ್ರತ್ಯೇಕ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08272 298379 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ: ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ ,ಮೈಸೂರು ರಸ್ತೆ ಮಡಿಕೇರಿ-571201.

ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಿ; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳವನ್ನು ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದೆ.

ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಉದ್ಯೋಗದಾತರು ಯುವ ಸಮೃದ್ಧಿ ಸಮ್ಮೇಳನದ ಬೃಹತ್ ಉದ್ಯೋಗಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಇದಕ್ಕಾಗಿ ಉದ್ಯೋಗಾಂಕ್ಷಿಗಳು, ಉದ್ಯೋಗದಾತರು ಹೆಸರು ನೋಂದಣಿ ಮಾಡಬಹುದು.

ಉದ್ಯೋಗಾಕಾಂಕ್ಷಿಗಳು/ ಉದ್ಯೋಗದಾತರು https://Skillconnect.kaushalkar.com/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಧಿಕಾರಿ/ ಸಿಬ್ಬಂದಿಯವರನ್ನು ಭೇಟಿ ಮಾಡಬಹುದು ಅಥವ 08272-225851/ 9113935220/ 8147573281 ಸಂಖ್ಯೆಗೆ ಕಛೇರಿ ವೇಳೆಯಲ್ಲಿ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+