ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 08; ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಒಟ್ಟು 11 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 15 ಅಕ್ಟೋಬರ್ 2021 ಕೊನೆಯ ದಿನವಾಗಿದೆ.

ಸ್ಟೇಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರದಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ 39,000 ರೂ.ಗಳಿಂದ ವೇತನ ಶ್ರೇಣಿ ಇದೆ.

ರೈಲ್ವೆ ನೇಮಕಾತಿ: 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ರೈಲ್ವೆ ನೇಮಕಾತಿ: 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಕೋಆರ್ಡಿನೇಟರ್ 1, ಪ್ರಾಜೆಕ್ಟ್ ಕನ್ಸಲ್ಟೆಂಟ್ 4, ಅಸಿಸ್ಟೆಂಟ್ ಪ್ರಾಜೆಕ್ಟ್ ಕನ್ಸಲ್ಟೆಂಟ್ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸ್ಟೇಟ್ ಕೋಆರ್ಡಿನೇಟರ್ ಹುದ್ದೆಗೆ 45 ವರ್ಷದೊಳಗಿನ, ಪ್ರಾಜೆಕ್ಟ್ ಕನ್ಸಲ್ಟೆಂಟ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಕನ್ಸಲ್ಟೆಂಟ್ ಹುದ್ದೆಗೆ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ

Apply For Various Post At NABARD Consultancy Services

ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ.

ಸ್ಟೇಟ್ ಕೋಆರ್ಡಿನೇಟರ್ ಹುದ್ದೆಗೆ MSW, MBA ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಪ್ರಾಜೆಕ್ಟ್ ಕನ್ಸಲ್ಟೆಂಟ್ ಹುದ್ದೆಗೆ ಬಿಇ, ಬಿಟೆಕ್, ಪದವಿ, ಸ್ನಾತಕೋತ್ತರ ಪದವಿ, ಸಿಎ ವಿದ್ಯಾರ್ಹತೆ ನಿಗದಿಗೊಳಿಸಲಾಗಿದೆ. ಅಸಿಸ್ಟೆಂಟ್ ಪ್ರಾಜೆಕ್ಟ್ ಕನ್ಸಲ್ಟೆಂಟ್ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ: 3261 ಹುದ್ದೆಗಳಿವೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ: 3261 ಹುದ್ದೆಗಳಿವೆ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ಮೊದಲು ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನೀಡುವಂತೆ ಪ್ರಕಟಣೆಯಲ್ಲಿ ಸೂಚನೆ ನೀಡಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ nabcons.com ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಹಾಕಿ; ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ ಬೆಂಗಳೂರು ಅನ್ನು ರಾಜ್ಯ ಉತ್ಕಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿದೆ.

ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ Young Professional, Sports Masseur and Sports Nutritionist ನೇಮಕಾತಿಗಾಗಿ ಅರ್ಹ ಅಭ್ಯಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 10ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮಾನ್ಯ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080 22215601.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ; ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಯಲಹಂಕ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಾಮಾನ್ಯ (ಮಹಿಳಾ) ಮೇಲ್ವಿಚಾರಕರ ಹುದ್ದೆಗಳನ್ನು ಆಹ್ವಾನಿಸಲಾಗಿದೆ. ಮಾಸಿಕ 12,000 ರೂ. ಗೌರವ ಸಂಭಾವನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಪಂಚಾಯಿತಿಯ ಸ್ಥಳೀಯ ನಿವಾಸಿಗಳಾಗಿರಬೇಕು ಹಾಗೂ ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು ಮತ್ತು ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಹಾಗೂ ಇತರೆ ದಾಖಾಲಾತಿಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ಅರ್ಜಿ ನಮೂನೆಯನ್ನು ಆಯಾ ಪಂಚಾಯಿತಿ ಕಾರ್ಯಾಲಯಗಳಲ್ಲಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Recommended Video

ಚಹರ್ ತನ್ನ ಹುಡುಗಿಗೆ ಸ್ಟೇಡಿಯಂನಲ್ಲೇ ಲವ್ ಪ್ರಪೋಸ್ ಮಾಡಿದ್ದನ್ನ ನೋಡಿ ಎಲ್ರೂ ಶಾಕ್ | Oneindia Kannada

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪನಿರ್ದೇಶಕರವರ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08172-268608.

English summary
NABARD consultancy services invited applications to fill 11 post. Candidates can apply online till 15, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X