ಬೆಂಗಳೂರು; ಎನ್‌ಎಎಲ್‌ನಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ನವೆಂಬರ್ 30 : ಬೆಂಗಳೂರಿನಲ್ಲಿ ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನವಾಗಿದೆ.
ಎನ್ಎಎಲ್ Jr. secretariat assistant, stenographer ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಒಟ್ಟು ಹುದ್ದೆಗಳ ಸಂಖ್ಯೆ 24. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ 10+2 ಅಥವ ಪಿಯುಸಿ ವ್ಯಾಸಂಗ ಮಾಡಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 30 ರಿಂದ 38 ಸಾವಿರದ ತನಕ ವೇತನ ನಿಗದಿ ಮಾಡಲಾಗಿದೆ.

Jr. secretariat assistant ಹುದ್ದೆಗೆ 28, stenographer ಹುದ್ದೆಗೆ 27 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.
ಟೈಪಿಂಗ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್












Click it and Unblock the Notifications