ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು

|
Google Oneindia Kannada News

ಬೆಂಗಳೂರು, ಜೂನ್ 22; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 5/7/2021ರೊಳಗೆ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು

ಜಿಲ್ಲಾ ಪಂಚಾಯಿತಿ ಕಚೇರಿ (ಜಲ ಜೀವನ ಮಿಷನ್) ಅಡಿ ಜಿಲ್ಲಾ ಸಂಯೋಜಕರ 5 ಹುದ್ದೆಗಳ ಭರ್ತಿ. ಆಯ್ಕೆಯಾದ ಅಭ್ಯರ್ಥಿಗಳಿಗೆ 22,000 ದಿಂದ 25,000 ರೂ. ವೇತನ ನಿಗದಿ ಮಾಡಲಾಗಿದೆ. ಸ್ಥಳಗಳು, ಹರಪನಹಳ್ಳಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು.

ದಾವಣಗೆರೆ; ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ದಾವಣಗೆರೆ; ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Apply For Various Post At Rural Drinking Water and Sanitation Department

ಜಿಲ್ಲಾ ಪಂಚಾಯಿತಿ ಕಚೇರಿ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಅಡಿ ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರ ಒಂದು ಹುದ್ದೆ ಇದೆ. ಅಭ್ಯರ್ಥಿಗಳಿಗೆ 22,000 ದಿಂದ 25,000 ವೇತನವಿದೆ. ಸ್ಥಳ, ಚಿಕ್ಕಬಳ್ಳಾಪುರ

ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು

ಜಿಲ್ಲಾ ಪಂಚಾಯಿತಿ ಕಚೇರಿ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಅಡಿ ನೈರ್ಮಲ್ಯ ಮತ್ತು ಶುಚಿತ್ವ ಸಮಾಲೋಚಕರ 1 ಹುದ್ದೆ ಭರ್ತಿ. 22,000 ದಿಂದ 25,000 ವೇತನ ನಿಗದಿ ಮಾಡಲಾಗಿದೆ. ಸ್ಥಳ, ಚಿಕ್ಕಬಳ್ಳಾಪುರ

ಪ್ರಕಟಣೆ ಹೊರಡಿಸಿದ ದಿನಾಂಕ 19/6/2021ಕ್ಕೆ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ರೆಸ್ಯೂಮ್ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು.

ಅರ್ಜಿ ಸಲ್ಲಿಸಲು ವಿಳಾಸ; ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ. ಹೆಚ್‌. ಬಿ ಕಟ್ಟಡ, ಕಾವೇರಿ ಭವನ, ಕೆ. ಜಿ. ರಸ್ತೆ, ಬೆಂಗಳೂರು 5600009.

ಅರ್ಜಿಗಳನ್ನು 5/7/2021ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ, ಅರ್ಜಿ ನಮೂನೆಗಾಗಿ https://rdpr.karnataka.gov.in ಮತ್ತು http://swachhamevejayate.org ವೆಬ್ ಸೈಟ್‌ಗೆ ಭೇಟಿ ನೀಡಬಹು.

English summary
Rural drinking water and sanitation department Karnataka invited applications for various post. Candidates can submit applications till 5/7/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X