ಉದ್ಯೋಗ ವಾರ್ತೆ; ಬಳ್ಳಾರಿ, ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ
ಶಿವಮೊಗ್ಗ, ಮಾರ್ಚ್ 06: ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ವ್ಯವಸ್ಥೆಯ ಉನ್ನತೀಕರಣವಾಗಿದೆ. ಈ ಸೌಲಭ್ಯದ ವ್ಯವಸ್ಥಿತ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ತಂತ್ರಜ್ಞರ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಒಂದು ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್ 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ತನಕ ನೇರ ಸಂದರ್ಶನವನ್ನು ಸಾಗರದ ಆಡಳಿತ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತರು ತಮ್ಮ ವಿದ್ಯಾರ್ಹತೆ ಮೂಲ ದಾಖಲಾತಿಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಆಡಳಿತ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಯೋಮೆಡಿಕಲ್ /ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಇನ್ಸುಟ್ರುಮೆಂಟೇಷನ್/ ಮ್ಯಾಕಾನಿಕಲ್/ ಇನ್ಸುಮೆಂಟ್ ಮ್ಯಾಕಾನಿಕ್ / ಮೇಂಟೇನೆನ್ಸ್ ಮ್ಯಾಕಾನಿಕ್‌ಗಳಲ್ಲಿ ಡಿಪ್ಲೊಮಾ/ ಐಟಿಐ ವಿದ್ಯಾರ್ಹತೆ ಹೊಂದಿರುವವರಿಗೆ ಅಥವಾ ಅನುಭವವಿರುವವರಿಗೆ ಹಾಗೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.
ಸ್ವಯಂ ಸೇವಕರ ಹುದ್ದೆಗೆ ಅರ್ಜಿ; ಬಳ್ಳಾರಿ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ 2021-22 ನೇ ಸಾಲಿನ ಯುವ ಸ್ವಯಂ ಸೇವಕರ ಆಯ್ಕೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಮೊಂಟು ಪಾತರ್ ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅರ್ಜಿ ಸಲ್ಲಿಸುವವರು 15 ವರ್ಷ ಮೇಲ್ಪಟ್ಟು 29 ವರ್ಷ ಒಳಗಿನವರಾಗಿರಬೇಕು, ಒಳ್ಳೆಯ ಸಂವಾದದ ಕೌಶಲ್ಯ, ನೆಹರು ಯುವ ಕೇಂದ್ರ ಸಂಘಟನ ಚಟುವಟಿಕೆಗಳು ಅಥವಾ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿರಬೇಕು.
ಅರ್ಜಿಗಳನ್ನು ಮಾರ್ಚ್ 8ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ ಕಛೇರಿ ಡಿಸಿ ಕಂಪೌಂಡ್ ಹಾಗೂ ದೂರವಾಣಿ ಸಂಖ್ಯೆ 08392-276839ಗೆ ಸಂಪರ್ಕಿಸಬಹುದು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಹೊಸಪೇಟೆ ನಗರಸಭೆಯ ವತಿಯಿಂದ ಕೌಶಲ್ಯಾಭಿವೃಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ (ಗುಂಪು) ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಮಾಡುವ ದಿನಾಂಕವನ್ನು ವಿಸ್ತರಣೆ ಮಾಡಿ ಹೊಸಪೇಟೆ ನಗರಸಭೆಯ ಪೌರಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ ಸಂಖ್ಯೆ 3. ಮಾಸಿಕ ಗೌರವಧನ 8 ಸಾವಿರ ರೂ. ಗಳು. ಸಾರಿಗೆ ಭತ್ಯೆ 2 ಸಾವಿರ ರೂ. ಈಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಕೊನೆಯ ದಿನಾಂಕವನ್ನು ಮಾರ್ಚ್ 21ರ ತನಕ ವಿಸ್ತರಣೆ ಮಾಡಲಾಗಿದೆ.
ಅರ್ಹತೆಗಳು; ಅರ್ಜಿ ಸಲ್ಲಿಸುವ ಅಭ್ಯರ್ಥಿ ಕನಿಷ್ಟ ಪಿಯುಸಿ ದ್ವಿತೀಯ ವರ್ಷ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುತ್ತದೆ. ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು). ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು , ಕನಿಷ್ಟ 3 ವರ್ಷಗಳಿಂದ ಇತರೆ ಇಲಾಖೆ ಮತ್ತು ಸಂಸ್ಥೆಯಡಿ ರಚಿಸಲಾದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯಯಾಗಿರಬೇಕು.
ಆಂತರಿಕ ಸಾಲ ಪಡೆದು ಕಟಬಾಕಿದಾರರಾಗಿರಬಾರದು, ಸರ್ಕಾರಿ/ ಅರೇ ಸಕಾರಿ/ ಎನ್‌ಜಿಓ ಗಳಲ್ಲಿ ಉದ್ಯೋಗಸ್ಥರಾಗಿರಬಾರದು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು. ವಿದ್ಯಾರ್ಹತೆ 18 ರಿಂದ 45 ವರ್ಷಗಳು.
ಹೊಸಪೇಟೆ ನಗರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ಅರ್ಜಿದಾರರು ಕಛೇರಿಯ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.












Click it and Unblock the Notifications