ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ; ಸೆ.5ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 06; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸಲು ಸಿಬಂದ್ದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ್ 5ರೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಕಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಯಾವ-ಯಾವ ಹುದ್ದೆಗಳು; ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಆಡಳಿತಾಧಿಕಾರಿಗಳು 4, ಆಪ್ತ ಸಮಾಲೋಚಕರು 4, ಸಮಾಜ ಸೇವಾ ಕಾರ್ಯಕರ್ತೆಯರು 8, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್) 8, ವಿವಿದೋದ್ದೇಶ ಸ್ವಚ್ಛತಗಾರರು 8 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಡಳಿತಾಧಿಕಾರಿಗಳ ಹುದ್ದೆಗೆ ಅಭ್ಯರ್ಥಿಯು ಎಂ.ಎಸ್.ಡಬ್ಲ್ಯೂ/ ಸ್ನಾತಕೋತ್ತರ ಕಾನೂನು ಪದವಿ / ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವಲಪ್ ಮೆಂಟ್ ಮತ್ತು ಫ್ಯಾಮಿಲಿ ರಿಲೇಶನ್) ಎಂ.ಎಸ್.ಸಿ. ಸೈಕಾಲಜಿ/ ಎಂ.ಎಸ್.ಸಿ ಸೈಕ್ರಿಯಾಟ್ರಿ. ಪದವೀಧರರಾಗಿರಬೇಕು.
ಆಪ್ತ ಸಮಾಲೋಚಕ ಹುದ್ದೆಗೆ ಅಭ್ಯರ್ಥಿಯು ಎಂ.ಎಸ್.ಡಬ್ಲ್ಯೂ/ ಸ್ನಾತಕೋತ್ತರ ಕಾನೂನು ಪದವಿ/ ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವಲಪ್ ಮೆಂಟ್ ಮತ್ತು ಫ್ಯಾಮಿಲಿ ರಿಲೇಶನ್) ಎಂ.ಎಸ್.ಸಿ. ಸೈಕಾಲಜಿ/ ಎಂ.ಎಸ್.ಸಿ ಸೈಕ್ರಿಯಾಟ್ರಿ. ಪದವೀಧರರಾಗಿರಬೇಕು.
ಸಮಾಜ ಸೇವಾ ಕಾರ್ಯಕರ್ತೆರ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ), ವಕೀಲ ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು ಹಾಗೂ ವಿವಿದೊದ್ದೇಶ ಸ್ವಚ್ಛತಗಾರರ ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
ಆಸಕ್ತ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ್ 5ರೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಇಲ್ಲಿಗೆ ತಮ್ಮ ವಿವರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-29578688.
ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ; ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 14 ಕಲ್ಯಾಣ ಸಂಘಟಿಕರು 'ಸಿ' ವೃಂದದ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ‍್ಯಾಂಕ್‌ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಪತ್ರಿಕೆಯಲ್ಲಿ ಪ್ರಕಟಣೆವಾದ ದಿನದಿಂದ 40 ದಿನದೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿಗಳನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು 560025 ಇಲ್ಲಿಗೆ ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459ಗೆ ಸಂಪರ್ಕಿಸಬಹುದು.












Click it and Unblock the Notifications