ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಮೇ 30ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕಲಬುರಗಿ, ಮೇ 04; ಕಲಬುರಗಿಯ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೇಂದ್ರ ಸರ್ಕಾರದ ಯೋಜನೆಯಾದ ಸಖಿ ಒನ್ ಸ್ಟಾಪ್ ಸೆಂಟರ್‌ ಅನ್ನು ಕಲಬುರಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸೆಂಟರ್‌ನಲ್ಲಿ ಕೆಲಸ ಮಾಡಲು ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕಲಬುರಗಿ: ಗ್ರಾಮ್ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನಕಲಬುರಗಿ: ಗ್ರಾಮ್ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಆಡಳಿತಾಧಿಕಾರಿಗಳು 1, ಸಲಹೆಗಾರ 1, ವಿಷಯ ನಿರ್ವಾಹಕರು/ ಸಮಾಜ ಕಾರ್ಯಕರ್ತೆ 2, ಪ್ಯಾರಾಲೀಗಲ್ ಸಿಬ್ಬಂದಿ/ ವಕೀಲರು 2 ಹಾಗೂ ವಿವಿಧೋದ್ದೇಶ ಕ್ಲೀನರ್/ ಭದ್ರತೆ 2 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಕಲಬುರಗಿ; ಕೆಲಸ ಖಾಲಿ ಇದೆ, ಮೇ 16ರ ತನಕ ಅರ್ಜಿ ಹಾಕಿ ಕಲಬುರಗಿ; ಕೆಲಸ ಖಾಲಿ ಇದೆ, ಮೇ 16ರ ತನಕ ಅರ್ಜಿ ಹಾಕಿ

Apply For Various Post At Sakhi One Stop Centre Kalaburagi

ಸಖಿ ಯೋಜನೆಯಡಿ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಅಂಗೀಕೃತ ಕಾಲೇಜು/ ವಿಶ್ವ ವಿದ್ಯಾಲಯಗಳಿಂದ ಶಿಕ್ಷಣ ಪಡೆದಿರಬೇಕು. ಅಭ್ಯರ್ಥಿಗಳ ಆಯ್ಕೆಯು ತಾತ್ಕಾಲಿಕವಾಗಿದ್ದು, ನೇಮಕಾತಿ ಅವಧಿ 11 ತಿಂಗಳು.

BHEL ನೇಮಕಾತಿ; 75 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ BHEL ನೇಮಕಾತಿ; 75 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಸದರಿ ಮೇಲಿನ ಹುದ್ದೆಗಳ ಕರ್ತವ್ಯವನ್ನು 24*7 ನಿರ್ವಹಿಸಬೇಕಾಗುತ್ತದೆ. ಕಲಬುರಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಹ ಸ್ಥಳೀಯ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆಗಾಗಿ ಪರಿಗಣಿಸಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಮೇ 30ರೊಳಗೆ ಸಲ್ಲಿಕೆ ಮಾಡಬೇಕು.

ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಅಂಚೆ ಮೂಲಕ ಬಂದ ಅಥವಾ ನೇರವಾಗಿ ಸಲ್ಲಿಸಬೇಕು.

ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಿದ್ಯಾರ್ಹತೆ, ಗೌರವಧನ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ನಗರದ ಚಂದ್ರಶೇಖರ ಕ್ರೀಡಾಂಗಣ ಎದುರು ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-278659.

ಸಹಾಯಕ ಹುದ್ದೆಗಳಿಗೆ ಅರ್ಜಿ; ಕಲಬುರಗಿ ಜಿಲ್ಲಾ ಬಾಲ ಭವನದಲ್ಲಿ ಗೌರವಧನದ ಆಧಾರದ ಮೇಲೆ ಕಛೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 16ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಗೌರವಧನ ಆಧಾರದ ಮೇಲೆ ಕಚೇರಿ ಸಹಾಯಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ವಿದ್ಯಾರ್ಹತೆ/ ಹೆಚ್ಚುವರಿ ಅರ್ಹತೆಗಳು/ ಅನುಭವ ಹಾಗೂ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ತರಬೇತಿಯಗಳನ್ನು ಹಮ್ಮಿಕೊಳ್ಳಲು ಸಮರ್ಥ/ ಕೌಶಲ್ಯ ಹೊಂದಿರುವ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಪೂರ್ಣ ಹಿಡಿತ ಹೊಂದಿರಬೇಕು. ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಿ ಸಂದರ್ಶನ/ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು/ ಅನುಭವ/ ಕಂಪ್ಯೂಟರ್ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪಿಯುಸಿ ಮತ್ತು ಮೇಲ್ಪಟ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ನೇಮಕಾತಿ 11 ತಿಂಗಳ ಅವಧಿಯಾಗಿದ್ದು, ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜನ್ಮ ದಿನಾಂಕದ ದೃಢೀಕರಣಕ್ಕಾಗಿ ಎಸ್ಎಸ್ಎಲ್‌ಸಿ ಅಂಕಪಟ್ಟಿ/ ಶಾಲಾ ವರ್ಗಾವಣೆ ಪತ್ರ, ಹುದ್ದೆಗೆ ನಿಗದಿಪಡಿಸಿ ವಿದ್ಯಾರ್ಹತೆ ಅಂಕಪಟ್ಟಿ, ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಿಂದ ಪಡೆದು ಮೇ 16ರ ವರೆಗೆ ಸಲ್ಲಿಸಬಹುದು.

English summary
Apply for various post at Sakhi one-stop centre at Kalaburagi. Candidates can submit applications before May 30th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X