ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ; ಜ.30ರ ತನಕ ಅರ್ಜಿ ಹಾಕಿ

|
Google Oneindia Kannada News

ಶಿವಮೊಗ್ಗ, ಜನವರಿ 03; ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರ, ಬೆರಳಚ್ಚುಗಾರ, ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 30ರ ರಾತ್ರಿ 11.59 ಕೊನೆಯ ದಿನವಾಗಿದೆ.

ಬೆರಳಚ್ಚು-ನಕಲುಗಾರರ 4, ಬೆರಳಚ್ಚುಗಾರ 9 ಮತ್ತು ಶೀಘ್ರಲಿಪಿಗಾರ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ.

3000 ಭೂ ಮಾಪಕರ ನೇಮಕಾತಿ; ಜನವರಿ 21ರ ತನಕ ಅರ್ಜಿ ಹಾಕಿ 3000 ಭೂ ಮಾಪಕರ ನೇಮಕಾತಿ; ಜನವರಿ 21ರ ತನಕ ಅರ್ಜಿ ಹಾಕಿ

ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ 10 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

2,52,902 ಲಕ್ಷ ಹುದ್ದೆಗಳು ಖಾಲಿ; ನೇಮಕಾತಿ ಬಗ್ಗೆ ಸರ್ಕಾರದ ಮಾಹಿತಿ2,52,902 ಲಕ್ಷ ಹುದ್ದೆಗಳು ಖಾಲಿ; ನೇಮಕಾತಿ ಬಗ್ಗೆ ಸರ್ಕಾರದ ಮಾಹಿತಿ

Apply For Various Post At Shivamogga Court

ಬೆರಳಚ್ಚು-ನಕಲುಗಾರ; ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಪಂಚಾಯತ್ ರಾಜ್ ಇಲಾಖೆ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಪಂಚಾಯತ್ ರಾಜ್ ಇಲಾಖೆ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಅಭ್ಯರ್ಥಿಗೆ ಕನಿಷ್ಟ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ಕ್ಕೆ 40 ವರ್ಷದ ಗರಿಷ್ಟ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ., ಪ್ರವರ್ಗ-2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ಇದೆ.

ಬೆರಳಚ್ಚುಗಾರರ; ಅಭ್ಯರ್ಥಿ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಸೆಕ್ರೇಟರಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ.

ಕನಿಷ್ಟ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ಕ್ಕೆ 40 ವರ್ಷದ ಗರಿಷ್ಟ ವಯೋಮಿತಿ ಇದೆ.

ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ. ಪ್ರವರ್ಗ-2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇದೆ.

ಶೀಘ್ರಲಿಪಿಗಾರ; ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿಬೇಕು.

ಅಭ್ಯರ್ಥಿಗೆ ಕನಿಷ್ಟ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35 ವರ್ಷಗಳು, 2ಎ/ 2ಬಿ/ 3ಎ/ 3ಬಿಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ 40 ವರ್ಷದ ಗರಿಷ್ಟ ವಯೋಮಿತಿ ಇದೆ.

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ., ಪ್ರವರ್ಗ-2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Apply for various post at District & Sessions Court Shivamogga. Candidates can apply till January 30 through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X