ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಡಿಸೆಂಬರ್ 10ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕಲಬುರಗಿ, ಡಿಸೆಂಬರ್ 01; ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಸಂಸ್ಥೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 10 ಡಿಸೆಂಬರ್ 2021 ಕೊನೆಯ ದಿನವಾಗಿದೆ.

ಮ್ಯಾನೇಜರ್ 2, ಅಕೌಂಟ್ ಅಫೀಸರ್ 1, ಅಕೌಂಟ್ಸ್ ಕ್ಲರ್ಕ್ 1, ಸ್ಟೋರ್ ಇನ್‌ ಚಾರ್ಜ್ 1, ಚೀಫ್ ಇಂಜಿನಿಯರ್ 1, ಕ್ಲರ್ಕ್ (ಜ್ಯೂನಿಯರ್ ಲೆವಲ್) 10, ಶಿಫ್ಟ್ ಇಂಜಿನಿಯರ್ 4 ಸೇರಿದಂತೆ ಒಟ್ಟು 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಶಿವಮೊಗ್ಗ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ; ಡಿ. 30ರ ತನಕ ಅರ್ಜಿ ಹಾಕಿ ಶಿವಮೊಗ್ಗ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ; ಡಿ. 30ರ ತನಕ ಅರ್ಜಿ ಹಾಕಿ

ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿಯಲ್ಲಿ ಕೆಲಸ ಮಾಡಬೇಕಿದೆ. ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಸಂಸ್ಥೆ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವೇತನ ನಿಗದಿ ಮಾಡಲಾಗಿದೆ.

ಆಯಿಲ್ ಇಂಡಿಯಾದಲ್ಲಿ 146 ಹುದ್ದೆಗಳಿವೆ, ಕೂಡಲೇ ಅರ್ಜಿ ಹಾಕಿ ಆಯಿಲ್ ಇಂಡಿಯಾದಲ್ಲಿ 146 ಹುದ್ದೆಗಳಿವೆ, ಕೂಡಲೇ ಅರ್ಜಿ ಹಾಕಿ

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಡಿಸೆಂಬರ್ 10ರೊಳಗೆ ಅರ್ಜಿ ಹಾಕಿ

ಮ್ಯಾನೇಜರ್ ಹುದ್ದೆಗೆ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು 5 ವರ್ಷಗಳ ಕಾಲ ಸಕ್ಕರೆ ಉದ್ಯಮದ ತಯಾರಿಗೆ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಅಕೌಂಟ್ ಅಫೀಸರ್ ಹುದ್ದೆಗೆ ಬಿಕಾಂ/ ಎಂ.ಕಾಂ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು 5 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ

ಅಕೌಂಟ್ಸ್ ಕ್ಲರ್ಕ್ ಹುದ್ದೆಗೆ ಬಿಕಾಂ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು 5 ವರ್ಷಗಳ ಕಾಲ ಟ್ಯಾಲಿ/ ಜಿಎಸ್‌ಟಿಯಲ್ಲಿ ಕೆಲಸ ಮಾಡಿರಬೇಕು. ಸ್ಟೋರ್ ಇನ್‌ ಚಾರ್ಜ್ ಹುದ್ದೆಗೆ ಬಿಇ/ ಬಿಟೆಕ್ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ಚೀಫ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ/ ಬಿಟೆಕ್ (ಮೆಕ್), ಬಿಓಇ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ತಯಾರಿಕಾ ವಿಭಾಗದಲ್ಲಿ 10 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ [email protected] [email protected] ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ siddhasiri.com ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ.

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ ಹಾಗೂ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಹಾಗೂ ಸ್ವೀಕೃತಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಮುಂದುವರೆದ ಕಂತುಗಳಿಗೆ ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಸಕ್ತರು https://suvidha.karnataka.gov.in ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸುವುದು.

ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ 18 -55 ವರ್ಷದೊಳಗಿನ ಅಭ್ಯರ್ಥಿಗಳು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಿಗಮದ ವೆಬ್‍ಸೈಟ್‍ ಅನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸುವುದು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 40,000, ಪಟ್ಟಣ ಪ್ರದೇಶದವರಿಗೆ ರೂ. 55,000 ಮಿತಿಯೊಳಗಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಸೌಲಭ್ಯ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಅರ್ಜಿ ಸಲ್ಲಿಸುವಂತಿಲ್ಲ.

Recommended Video

MP Sumalatha Ambareesh: ಈ ಪಕ್ಷಕ್ಕೆ ನನ್ನ ಬೆಂಬಲ ಸದಾ ಇರತ್ತೆ!! | Oneindia Kannada

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/1/2022. ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-229634 ಅಥವಾ www.dbcdc.karnataka.gov.in ವೆಬ್‍ಸೈಟ್ ನೋಡಬಹುದು.

English summary
Siddhasiri Ethanol and Power invited applications for clerks, manager posts. Candidates can submit applications till 10th December 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X