• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೀಚರ್ಸ್‌ ಕೋ-ಆಪರೇಟಿವ್ ಬ್ಯಾಂಕ್‌ ನೇಮಕಾತಿ, ಅರ್ಜಿ ಹಾಕಿ

|
Google Oneindia Kannada News

ಉಡುಪಿ, ನವೆಂಬರ್ 21; ಟೀಚರ್ಸ್‌ ಕೋ-ಆಪರೇಟಿವ್ ಬ್ಯಾಂಕ್‌ ನಿಯಮಿತ. ಎಲ್. ಉಡುಪಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 8/12/2022.

ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್‌ ಹುದ್ದೆಯ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ವಿಶೇಷ ರಿಸರ್ವ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ ವಿಶೇಷ ರಿಸರ್ವ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

ಈ ಬ್ಯಾಂಕ್ 1915ರಲ್ಲಿ ಸ್ಥಾಪನೆಯಾಗಿ ಇದೀಗ 107 ವರ್ಷಗಳನ್ನು ಪೂರೈಸಿದ್ದು, ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ. ಬ್ಯಾಂಕ್ ಉಡುಪಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಕರ್ನಾಟಕದಲ್ಲಿ 14 ಶಾಖೆಗಳೊಂದಿಗೆ 650 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸುತ್ತಿದೆ.

ಶೇ 14ರಷ್ಟು ಉದ್ಯೋಗ ಕಡಿತ ಘೋಷಿಸಿದ ಡಿಜಿಟಲ್ ಪೇಮೆಂಟ್ ಕಂಪನಿಶೇ 14ರಷ್ಟು ಉದ್ಯೋಗ ಕಡಿತ ಘೋಷಿಸಿದ ಡಿಜಿಟಲ್ ಪೇಮೆಂಟ್ ಕಂಪನಿ

ಯಾವ-ಯಾವ ಹುದ್ದೆಗಳು; ಮ್ಯಾನೇಜರ್ (1). ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದ ಯಾವುದೇ ಪದವಿಯೊಂದಿಗೆ ಅರ್ಹತೆ ಪಡೆದ ಚಾರ್ಟರ್ಡ್‌ ಅಕೌಂಟೆಂಟ್. ಕನಿಷ್ಠ 1 ವರ್ಷದ ಬ್ಯಾಂಕಿಂಗ್ ಅನುಭವ ಹೊಂದಿರಬೇಕು.

4,100 ಉದ್ಯೋಗ ಕಡಿತಕ್ಕೆ ಮುಂದಾದ ಸಿಸ್ಕೋ 4,100 ಉದ್ಯೋಗ ಕಡಿತಕ್ಕೆ ಮುಂದಾದ ಸಿಸ್ಕೋ

ಜೂನಿಯರ್ ಅಸಿಸ್ಟೆಂಟ್ (23). ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವ ಸ್ನಾತಕೋತ್ತರ ಪದವಿ. ಸಹಕಾರ ಡಿಪ್ಲೊಮಾ ಹೊಂದಿದವರಿಗೆ ಆದ್ಯತೆ. ಪದವಿ ಅಥವ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಜೂನಿಯರ್ ಅಸಿಸ್ಟೆಂಟ್‌ ಟೆಕ್ನಿಕಲ್ (1) ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಇ ಪದವಿ ಅಥವ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ (ಎಂ. ಸಿ. ಎ).

ಜೂನಿಯರ್ ಅಸಿಸ್ಟೆಂಟ್ ಲೀಗಲ್ (1) ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಪದವಿಯೊಂದಿಗೆ ಬಾರ್ ಕೌನ್ಸಿಲ್ ಸದಸ್ಯತ್ವ ಹೊಂದಿರಬೇಕು. ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನದೊಂದಿಗೆ, ಸೇವಾ ಅನುಭವ ಹೊಂದಿರಬೇಕು.

ವಯೋಮಿತಿ; ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 21 ವರ್ಷಗಳು. ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿ 35 ವರ್ಷಗಳು. ಹಿಂದುಳಿದ ಜಾತಿ/ ಹಿಂದುಳಿದ ವರ್ಗಕ್ಕೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ 40 ವರ್ಷಗಳು.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 1 ಸಾವಿರ ರೂ. ಆನ್‌ಲೈನ್‌ ಮೂಲಕ ಪಾವತಿಸುವುದು. ಅರ್ಜಿ ಶುಲ್ಕವನ್ನು ವಾಪಸ್ ನೀಡಲಾಗುವುದಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡುವ ಅರ್ಜಿಗಳನ್ನು ಸ್ವೀಕಾರ ಮಾಡುವುದಿಲ್ಲ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ www.teachersbank.co.in

English summary
Udupi Teachers Co-operative Bank. L. invited applications for the various post. Candidates can apply till 8/12/2023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X