ಅಜ್ಜಂಪುರ ತಾಲೂಕು ಪಂಚಾಯಿತಿಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಏಪ್ರಿಲ್ 19; ಅಜ್ಜಂಪುರ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರಿಂದ ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ಅಜ್ಜಂಪುರದಲ್ಲಿ ಕೆಲಸ ಮಾಡಬೇಕಿದೆ.
'ಡಿ' ಗುಂಪು ನೌಕರರು (2) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಆಪರೇಟರ್ (2) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿಗಳನ್ನು ಸಲ್ಲಿಸುವವರು ಪಿ. ಯು. ಸಿ. ಉತ್ತೀರ್ಣಗೊಂಡಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಗಣಕಯಂತ್ರ ಕೋರ್ಸ್ ಮಾಡಿರಬೇಕು. ಕನ್ನಡ ಟೈಪಿಂಗ್ ಬಲ್ಲವರಾಗಿರಬೇಕು.
ವೆಬ್ ಸೈಟ್‌ನಲ್ಲಿ ಸರಿಯಾದ ಇ-ಮೇಲ್ ಐಡಿ ಮತ್ತು ದೂರವಾಣಿ ಸಂಖ್ಯೆಗಳನ್ನು ನಮೂದು ಮಾಡಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಿ.
ಅರ್ಜಿಯನ್ನು ಭರ್ತಿ ಮಾಡಿ, ನಿಗದಿತ ದಾಖಲೆಗಳನ್ನು ಲಗತ್ತಿಸಿ ರಿಜಿಸ್ಟರ್ ಅಥವ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಕೆ ಮಾಡಬೇಕು.
ಅರ್ಜಿಯನ್ನು ಕಳಿಸಲು ವಿಳಾಸ; Chief Executive Officer, Taluk Panchayat, Ajjampura, Karnataka.












Click it and Unblock the Notifications