ಬಳ್ಳಾರಿ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆಬ್ರವರಿ 10 : ಬಳ್ಳಾರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನವಾಗಿದೆ.

ಬೆರಳಚ್ಚುಗಾರರು 6, ಬೆರಳಚ್ಚು ನಕಲುಗಾರರು 9, ಆದೇಶ ಜಾರಿಕಾರರು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ನೇಮಕಾತಿ ಆದೇಶ ಸ್ಪಷ್ಟಪಡಿಸಿದೆ.

ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ/ಆಂಗ್ಲಭಾಷೆಯ ಹಿರಿಯ/ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಎಲ್ಲಾ ಹುದ್ದೆಗಳಿಗೂ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Apply For Various Post In Ballari District Court

ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ಹಾಗೂ ಭಾರೀ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ, ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು.

ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+