ಬೆಂಗಳೂರು; ವಿವಿಧ ಹುದ್ದೆ ಭರ್ತಿ, ಜೂ.23ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಜೂನ್ 15; ಬೆಂಗಳೂರು ನಗರ ಜಿಲ್ಲೆಯಲ್ಲಿ ಗೌರವಧನದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹರು ಜೂನ್ 23ರೊಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮಾತೃವಂಧನ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗೌರವ ಧನದ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದೆ.

ಜಿಲ್ಲಾ ಕಾರ್ಯಕ್ರಮ ಸಂಯೋಜಕರು 1 ಹಾಗೂ ಜಿಲ್ಲಾ ಯೋಜನಾ ಸಹಾಯಕರು 1 ಹುದ್ದೆಗಳ ನೇಮಕಾತಿ ನಡೆಯಲಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ವಿದ್ಯಾರ್ಹತೆ ವಿವರ: ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಸ್ನಾತಕೋತ್ತರ ಪದವಿ ಅಥವಾ ಸಮಾಜ ವಿಜ್ಞಾನ ವಿಷಯಗಳಲ್ಲಿ ಪದವಿ ಹೊಂದಿರಬೇಕು. ಜಿಲ್ಲಾ ಯೋಜನಾ ಸಹಾಯಕ ಹುದ್ದೆಗೆ ಯಾವುದೇ ಪದವಿ ಅಥವಾ ಸಮಾಜ ವಿಜ್ಞಾನ ವಿಷಯಗಳಲ್ಲಿ ಪದವಿ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿಯಿಂದ ಪಡೆದುಕೊಂಡು ಜೂನ್ 23ರ ಸಂಜೆ 5.3೦ರೊಳಗೆ ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26578688ಕ್ಕೆ ಕರೆ ಮಾಡಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ತರಬೇತಿಗೆ ಅರ್ಜಿ ಹಾಕಿ; ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳ ವಯೋಮಿತಿ 40 ವರ್ಷಗಳು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000 ಗಳ ಶಿಷ್ಯ ವೇತನ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಹಿರಿಯ ವಕೀಲರವರಲ್ಲಿ ತರಬೇತಿಗೆ ನಿಯೋಜಿಸಲಾಗುವುದು, ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ಸೂಕ್ತ ದಾಖಲೆಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 4ನೇ ಮುಖ್ಯ ರಸ್ತೆ, 16 ನೇ ಅಡ್ಡ ರಸ್ತೆ, ಸಂಪಂಗಿರಾಮನಗರ ಪೊಲೀಸ್ ಠಾಣೆ ಎದುರು, ಸಂಪಂಗಿರಾಮನಗರ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080 22240449.












Click it and Unblock the Notifications