ಬಾಬಾ ಅಣುಶಕ್ತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 25 : ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 6, 2019 ಕೊನೆಯ ದಿನವಾಗಿದೆ.
19 ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್, 73 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ 18 ರಿಂದ 35, 400 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.
ಲಿಖಿತ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಸಿಸ್ಟೆಂಟ್ ಸೆಕ್ಯೂರಿಟಿ ಅಫೀಸರ್ ಹುದ್ದೆಗೆ 150 ರೂ., ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications