ಬೆಂಗಳೂರು; ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಜುಲೈ 05 : ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು 24/7/2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇ-ಆಡಳಿತ ಸಚಿವಾಲಯ, ಇಆಸುಇ (ಇ-ಆಡಳಿತ) ಇದರ ಅಧೀನದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸ್ಥಾಪಿಸಿರುವ ಮತ್ತು ಕರ್ನಾಟಕ ಸಂಘ ಸಂಸ್ಥೆಗಳ ನೋಂದಣಿ ಅಧಿನಿಯಮ 1960ರ ಅನ್ವಯ ನೋಂದಣಿಯಾಗಿರುವ ಒಂದು ಸಂಸ್ಥೆ ಇದಾಗಿದೆ.

ಮಾಹಿತಿ ತಂತ್ರಜ್ಞಾನ (IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್‌ ಸಂಸ್ಥೆಯಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply For Various Post In Centre For Smart Governance

ಪ್ರಾಜೆಕ್ಟ್ ಮ್ಯಾನೇಜರ್ (2), ಪ್ರಾಜೆಕ್ಟ್ ಲೀಡ್ (2), ಬಿಸಿನೆಸ್ ಅನಲಿಸ್ಟ್ (4), ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ (3), ಸಾಫ್ಟ್‌ವೇರ್ ಇಂಜಿನಿಯರ್ (4), ಡೇಟಾಬೇಸ್ ಡಿಸೈನರ್ (1), ಆಪರೇಷನ್ಸ್ ಮ್ಯಾನೇಜರ್ (3), ಸಿಸ್ಟಮ್ ಅಡ್ಮಿನಿಸ್ಟ್ರೇಟರ್ (1), ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ (1) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅಭ್ಯರ್ಥಿಗಳು ತಮ್ಮ CVಗಳನ್ನು [email protected] ವಿಳಾಸಕ್ಕೆ 24/7/2020ರೊಳಗೆ ಕಳುಹಿಸಬೇಕು. ಎಲ್ಲಾ ಹುದ್ದೆಗಳನ್ನು ಮೂರು ವರ್ಷದ ಗುತ್ತಿಗೆ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಮತ್ತು ಸಂಸ್ಥೆಯ ಅಗತ್ಯಕ್ಕೆ ಅನುಗುಣವಾಗಿ ಗುತ್ತಿಗೆ ಅವಧಿಯನ್ನು ಮುಂದುವರೆಸಲು ಅವಕಾಶವಿದೆ.

ವಿದ್ಯಾರ್ಹತೆ, ಸೇವಾ ಅವಧಿ ಮುಂತಾದ ವಿವರಗಳಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+