• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿಕ್ಕಬಳ್ಳಾಪುರ; ಕೆಲಸ ಖಾಲಿ ಇದೆ, ಫೆ. 28ರೊಳಗೆ ಅರ್ಜಿ ಹಾಕಿ

|

ಚಿಕ್ಕಬಳ್ಳಾಪುರ, ಫೆಬ್ರವರಿ 17; ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 28/2/2021.

ಪ್ರಾಧ್ಯಾಪಕರು 6, ಸಹ ಪ್ರಾಧ್ಯಾಪಕರು 16, ಸಹಾಯಕ ಪ್ರಾಧ್ಯಾಪಕರು 26, ಹಿರಿಯ ಸ್ಥಾನಿಕ ವೈದ್ಯರು 5, ಟ್ಯೂಟರ್ 11, ಕಿರಿಯ ಸ್ಥಾನಿಕ ವೈದ್ಯರು 14 ಸೇರಿದಂತೆ ಒಟ್ಟು 78 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

ಶಿವಮೊಗ್ಗ; ಫೆಬ್ರವರಿ 20ರಂದು ಉದ್ಯೋಗ ಮೇಳ ಶಿವಮೊಗ್ಗ; ಫೆಬ್ರವರಿ 20ರಂದು ಉದ್ಯೋಗ ಮೇಳ

ಅಭ್ಯರ್ಥಿಗಳು ಅರ್ಹತೆ, ವಯಸ್ಸು, ವಿದ್ಯಾರ್ಹತೆ, ಅನುಭವ, ಮೀಸಲಾತಿ ವಿವರಗಳನ್ನು ವೆಬ್ ಸೈಟ್ ಮೂಲಕ ಪಡೆಯಬಹುದು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು.

ಯಾದಗಿರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರಗಳು ಯಾದಗಿರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರಗಳು

ನೇರ ನೇಮಕಾತಿಗಾಗಿ ಸಂದರ್ಶನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಯ, ಮುದ್ದೇನಹಳ್ಳಿಯಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 6/3/2021ರ ಬೆಳಗ್ಗೆ 9.30ರ ನಂತರ ನಡೆಸಲಾಗುತ್ತದೆ.

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಫೆ. 20ರೊಳಗೆ ಅರ್ಜಿ ಹಾಕಿ

ದಾಖಲಾತಿಗಳ ಪರಿಶೀಲನೆಗಾಗಿ ಅಭ್ಯರ್ಥಿಗಳು 5/3/2021ರಂದು ಬೆಳಗ್ಗೆ 9.30ಕ್ಕೆ ಚಿಕ್ಕಬಳ್ಳಾಪುರ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು/ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ವರದಿ ಮಾಡಿಕೊಳ್ಳಬೇಕು.

ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗುವಾಗ ಮೂಲ ದಾಖಲೆಗಳ ಜೊತೆ ಗೆಜೆಟೆಡ್ ಅಧಿಕಾರಿಯಿಂದ ಸಹಿ ಮಾಡಿಸಲಾದ 2 ಸೆಟ್ ದಾಖಲೆಗಳು, 2 ಪಾಸ್‌ ಪೋರ್ಟ್ ಸೈಜ್ ಫೋಟೋ ಮತ್ತು ವಿಶೇಷಾಧಿಕಾರಿ ಹೆಸರಿನಲ್ಲಿ ಪಾವತಿಯಾಗುವಂತೆ 2000 ರೂ. ಡಿಡಿಯೊಂದಿಗೆ ಹಾಜರಾಗಬೇಕು.

ಹುದ್ದೆಗಳ ಭರ್ತಿ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮೀಸಲಾತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ. ಮೀಸಲಾತಿ ಬಯಸುವ ಅಭ್ಯರ್ಥಿಗಳು ಅರ್ಜಿಯ ಜೊತೆ ಇತ್ತೀಚೆಗೆ ಪಡೆದ ಮೀಸಲಾತಿ ಪ್ರಮಾಣ ಪತ್ರ, ಆದಾಯ ಸಿಂಧುತ್ವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ವೆಬ್ ಸೈಟ್ ವಿಳಾಸ

English summary
Applications invited from candidates for various post in Chikkaballapur. Interview will be held on 6/3/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X