• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಮಂಗಳೂರು, ಮೇ 11; ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 28/5/2021 ಕೊನೆಯ ದಿನವಾಗಿದೆ.

ಸಹಾಯಕ ವ್ಯವಸ್ಥಾಪಕರು (7), ತಾಂತ್ರಿಕ ಅಧಿಕಾರಿ (4), ತಾಂತ್ರಿಕ ಅಧಿಕಾರಿ (ಪರಿಸರ) 1, ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್) 1, ವಿಸ್ತರಣಾಧಿಕಾರಿ ದರ್ಜೆ -2 (8), ಡೈರಿ ಸೂಪರ್ ವೈಸರ್ ದರ್ಜೆ-2 (5), ಆಡಳಿತ ಸಹಾಯಕರು ದರ್ಜೆ -2, ಮಾರುಕಟ್ಟೆ ಸಹಾಯಕರು ದರ್ಜೆ -2, ಕೆಮಿಸ್ಟ್ ದರ್ಜೆ -2, ಲೆಕ್ಕ ಸಹಾಯಕರು ದರ್ಜೆ -2, ಕಿರಿಯ ತಾಂತ್ರಿಕರು (ಇಲೆಕ್ಟ್ರಿಷನ್), ಕಿರಿಯ ತಾಂತ್ರಿಕರು (ಎಂ. ಆರ್. ಎ. ಸಿ) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 19 ಹುದ್ದೆಗಳಿಗೆ ಅರ್ಜಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 19 ಹುದ್ದೆಗಳಿಗೆ ಅರ್ಜಿ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷಗಳು, ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷಗಳು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷಗಳು.

ಬೆಳೆ ವಿಮಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಬೆಳೆ ವಿಮಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಪದವಿ ಎಂದರೆ 10+2ರ ವಿದ್ಯಾಭ್ಯಾಸದ ನಂತರ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾಗಿರುವ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯನಿಂದ ನಿಯತವಾಗಿ ಪಡೆದ ಕನಿಷ್ಠ ಮೂರು ವರ್ಷಗಳ ಅವಧಿಯ ಸಾಂಪ್ರದಾಯಿಕ ಪದವಿ (10+2+3).

CRPF ಜಿಡಿಎಂಒ, ಜನರಲ್ ಡ್ಯೂಟಿ ಮೆಡಿಕಲ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ CRPF ಜಿಡಿಎಂಒ, ಜನರಲ್ ಡ್ಯೂಟಿ ಮೆಡಿಕಲ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಸ್ನಾತಕೋತ್ತರ ಪದವಿ ಎಂದರೆ (10+2+3)ರ ವಿದ್ಯಾಭ್ಯಾಸದ ನಂತರ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾಗಿರುವ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ನಿಯತವಾಗಿ ಪಡೆದ ಎರಡು ವರ್ಷ ಅವಧಿಯ ಸ್ನಾತಕೋತ್ತರ ಪದವಿ.

ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500 (ಬ್ಯಾಂಕ್ ಶುಲ್ಕ ಪ್ರತ್ಯೇಕ) ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.800 (ಬ್ಯಾಂಕ್ ಶುಲ್ಕ ಪ್ರತ್ಯೇಕ).

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.dkmul.com ಭೇಟಿ ನೀಡಬಹುದು.

English summary
Apply for junior technicians, chemist, administrator post in Dakshina Kannada Co-operative Milk Producers Union Limited. Candidates can 28-May-2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X