ಶಿವಮೊಗ್ಗ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗ, ಡಿಸೆಂಬರ್ 19; ಶಿವಮೊಗ್ಗ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ತಾಲ್ಲೂಕಿನ 4 ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ತಾಲ್ಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಹಾಗೂ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಜನವರಿ 3ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ತಾಲ್ಲೂಕು ಪಂಚಾಯಿತಿಯಲ್ಲಿ ಒಬ್ಬರು ಯಾವುದೇ ಪದವಿ ಹೊಂದಿರುವ ವಿಕಲಚೇತನರನ್ನು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಮತ್ತು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10ನೇ ತರಗತಿ ಉತ್ತೀರ್ಣರಾದ ವಿಕಲಚೇತನ ಕಾರ್ಯಕರ್ತರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ಗೌರವ ಧನದ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುತ್ತದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅರ್ಹ ವಿಕಲಚೇತನರಿಗೆ ಪುನರ್ವಸತಿ ಕಾರ್ಯಕ್ರಮಗಳನ್ನು ಕಲ್ಪಿಸುವುದು ಗ್ರಾಮೀಣ ಪುನರ್ವಸತಿ ಕಾರ್ಯಕ್ರಮದ ಉದ್ದೇಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವ ಧನ ನೀಡಲಾಗುತ್ತದೆ.

Apply For Various Post In Davanagere And Shivamogga

ಭದ್ರಾವತಿ ತಾಲ್ಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಎಂ.ಆರ್.ಡಬ್ಲ್ಯು ಹಾಗೂ ಭದ್ರಾವತಿ ತಾಲ್ಲೂಕಿನ ಅರಳಿಕೊಪ್ಪ, ಎರೇಹಳ್ಳಿ, ಹನುಮಂತಾಪುರ, ಸನ್ಯಾಸಿಕೊಡಮಗ್ಗಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿ.ಆರ್.ಡಬ್ಲು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಅರ್ಜಿಗಳನ್ನು ಸಲ್ಲಿಸುವವರು 18 ರಿಂದ 45 ವಯೋಮಿತಿಯೊಳಗಿರಬೇಕು. ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭದ್ರಾವತಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿರುವ ದಿನೇಶ್ ಮೊಬೈಲ್ ಸಂಖ್ಯೆ 7899137243 ಇವರಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಎಂ.ಆರ್.ಡಬ್ಲ್ಯು ಹುದ್ದೆಗೆ ಪದವಿ ಅಂಕಪಟ್ಟಿ ಮತ್ತು ವಿ.ಆರ್.ಡಬ್ಲ್ಯು ಹುದ್ದೆಗೆ 10 ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲೆಗಳನ್ನು ಲಗತ್ತಿಸಬೇಕು.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಗೌರವ ಸೇವೆ ಆಧಾರದ ಮೇಲೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರಾಗಿದ್ದು, 18 ರಿಂದ 35 ವರ್ಷದೊಳಗಿನ ವಯೋಮಾನದವರಾಗಿರಬೇಕು. ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವಿಕಲಚೇತನ ವರ್ಗಕ್ಕೆ ಸಂಬಂಧಿಸಿದಂತೆ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್. ಎಸ್. ಎಲ್. ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ.

ಅರ್ಜಿ ಸಲ್ಲಿಸುವವರು 2022ರ ಜನವರಿ 18ರ ಸಂಜೆ 5.30 ಗಂಟೆಯೊಳಗೆ ಆನ್‍ಲೈನ್ http://davanagere.nic.in/ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-264056.

ಕಲಬುರಗಿ ಅರ್ಜಿ ಸಲ್ಲಿಸಿ; ಪ್ರಸಕ್ತ 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ 10000 ರೂ. ವ್ಯಾಸಂಗ ವೇತನ/ ಫೆಲೋಶಿಪ್‌ ಮಂಜೂರಾತಿಗೆ ಅರ್ಜಿ ಕರೆಯಲಾಗಿದೆ.

ರಾಜ್ಯದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ ಅಥವಾ ಅದರ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಪೆಲೋಶಿಪ್ ಗೆ ಅನ್‌ಲೈನ್ ಮೂಲಕ ಡಿಸೆಂಬರ್ 30ರ ಸಂಜೆ 5.30 ಗಂಟೆ ತನಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್ ಸೈಟ್ www.bcwd.karnataka.gov.in ನೋಡಬಹುದು. ಸಹಾಯವಾಣಿ ಸಂಖ್ಯೆ 8050770004.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+