• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ

|
Google Oneindia Kannada News

ಹಾಸನ, ಅಕ್ಟೋಬರ್ 31; ಹಾಸನದಲ್ಲಿ ಸರ್ಕಾರಿ ವಕೀಲರ ಹುದ್ದೆಗೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು ನಿಯಮ) ಅನ್ವಯ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರುಗಳಿಗೆ ಹಾಸನ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೆಎಸ್‌ಒಯು ನೇಮಕಾತಿ; 32 ಬೋಧಕ ಹುದ್ದೆಗಳಿಗೆ ಅರ್ಜಿ ಹಾಕಿಕೆಎಸ್‌ಒಯು ನೇಮಕಾತಿ; 32 ಬೋಧಕ ಹುದ್ದೆಗಳಿಗೆ ಅರ್ಜಿ ಹಾಕಿ

ಏಳು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದವರು ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯದ ಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 8 ಸಂಜೆ 5 ಗಂಟೆಯಾಗಿರುತ್ತದೆ.

ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿ

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯವಿರುವ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಡಿ. ದೇವರಾಜ ಅರಸು ಭವನ, ವಿದ್ಯಾಗಣಪತಿ ದೇವಸ್ಥಾನದ ಅಡ್ಡರಸ್ತೆ ಆಕಾಶವಾಣಿ ಹತ್ತಿರ, ಸಾಲಗಾಮೆ ರಸ್ತೆ, ಹಾಸನ ಇಲ್ಲಿಗೆ ಸಲ್ಲಿಸಬೇಕು.

ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 150 ಹುದ್ದೆಗಳಿಗೆ ಅರ್ಜಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 150 ಹುದ್ದೆಗಳಿಗೆ ಅರ್ಜಿ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗಾಗಿ ದೂರವಾಣಿ ಸಂಖ್ಯೆ 08172-295108. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಗತ್ಯವಿರುವ ದಾಖಲಾತಿಗಳು; ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಅಂಕಪಟ್ಟಿ ದೃಢೀಕೃತ ಪ್ರತಿ, ಎಲ್. ಎಲ್. ಬಿ ದೃಡೀಕೃತ ಅಂಕಪಟ್ಟಿಗಳು, ವಕೀಲ ವೃತ್ತಿಯ ನೋಂದಣಿ ಪ್ರಮಾಣಪತ್ರ ದೃಢೀಕೃತ ಪ್ರತಿ, ಜಾತಿ ಪ್ರಮಾಣ ಪತ್ರ, ವಕೀಲ ವೃತ್ತಿ ನಡೆಸಿದ ಅನುಭವದ ಕುರಿತು ಸಂಕ್ಷಿಪ್ತ ವಿವರಗಳು, ಗಣಕಯಂತ್ರದ ಪರಿಣಿತಿ ಜ್ಞಾನ ಉಳ್ಳವರಾಗಿದ್ದಲ್ಲಿ ಇದರ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಬೇಕು. ಅರ್ಜಿದಾರರ ಭಾವಚಿತ್ರ ನೀಡುವಂತೆಯೂ ಪ್ರಕಟಣೆ ಹೇಳಿದೆ.

ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ; ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣೆ ಸಂಸ್ಥೆ ಯೋಜನೆಯಡಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2021-22ನೇ ಸಾಲಿನ ಸೀಮಿತ ಅವಧಿಗೆ ಹಳ್ಳಿಮೈಸೂರು ಹೋಬಳಿಗೆ ಸೇರಿದ ರೈತ ಸಂಪರ್ಕ ಕೇಂದ್ರದಲ್ಲಿ ನೇಮಕಾತಿ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಿದೆ.

ಕೃಷಿ ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳು ನೀಡುವ ಕೃಷಿ ಪದವಿ, ಕೃಷಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ನವೆಂಬರ್ 6 ಸಂಜೆ 5ರೊಳಗೆ ಅರ್ಜಿಗಳನ್ನು ಉಪ ಕೃಷಿ ನಿರ್ದೇಶಕರು ಹಾಸನ ಕಚೇರಿಗೆ ಸಲ್ಲಿಸಬಹುದು.

ನಿಗದಿತ ನಮೂನೆಯನ್ನು ಉಪ ಕೃಷಿ ನಿರ್ದೇಶಕರ ಕಚೇರಿ ಹಾಸನ ಇಲ್ಲಿ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿತ ವೇತನ ನೀಡಲಾಗುವುದು. ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೃಷಿ ನಿರ್ದೇಶಕರು ಹಾಸನ ಇವರನ್ನು ಸಂಪರ್ಕಿಸಬಹುದು.

ಉಚಿತ ತರಬೇತಿಗೆ ಅರ್ಜಿ ಆಹ್ವಾನ; ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಲ್ಲಿ ಪ್ರಸಕ್ತ ಸಾಲಿನ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿರುತ್ತದೆ.

16 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ, ಯುವತಿಯರು ಎಸ್. ಎಸ್. ಎಲ್. ಸಿ , ಐಟಿಐ ಪಾಸಾಗಿರುವ ಆಗಿರುವ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಯ ಟೂಲ್ ರೂಮ್ ಮಷಿನಿಸ್ಟ್ ತರಬೇತಿಯನ್ನು ಉಚಿತವಾಗಿ ನಡೆಸಲಾಗುವುದು. ಈ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಸಕ್ತ, ಅರ್ಹ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಅಂಕಪಟ್ಟಿ, ವಿದ್ಯಾಭ್ಯಾಸ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಭಾವಚಿತ್ರ ನಕಲು ಪ್ರತಿಗಳೊಂದಿಗೆ ಕೇಂದ್ರಕ್ಕೆ ಭೇಟಿ ನೀಡಬೇಕು.

ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಜಿಟಿಟಿಸಿ, 22 ಸಿ ಮತ್ತು ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆಎಸ್‍ಆರ್‌ಟಿಸಿ ಡಿಪೋ ಹತ್ತಿರ, ಹರಿಹರ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-243937, 9916908111, 8884488202, 8711913947ಗೆ ಸಂಪರ್ಕಿಸಬಹುದು.

English summary
Apply for various post in Hassan. Candidates can apply till November 7, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion