ಬೆಳೆ ವಿಮಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 10; ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಠಾನಗೊಳಿಸಲಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 17/5/2021ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಗುತ್ತಿಗೆ ಆಧಾರದ ಮೇಲೆ 2021-22ನೇ ಆರ್ಥಿಕ ಸಾಲಿನ ಅಂತ್ಯದವರೆಗೆ ಮಾತ್ರ ಷರತ್ತಿಗೆ ಒಳಪಟ್ಟು ಕಾರ್ಯ ನಿರ್ವಹಣೆ ಮಾಡಲು ಅರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ರಾಜ್ಯ ತಾಂತ್ರಿಕ ಘಟಕದ ಮುಖ್ಯಸ್ಥರು (1), ಕಾರ್ಯಕ್ರಮ ಸಂಯೋಜನಕರು, ಸಂವಹನ ಅಧಿಕಾರಿ, ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು, ದತ್ತಾಂಶ ವಿಶ್ಲೇಷಕರು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು, ಗುಮಾಸ್ತ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Apply For Various Post In Karnataka Agriculture Department

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನೇರವಾಗಿ ಅಥವ ಅಂಚೆಯ ಮೂಲಕ ಅರ್ಜಿಯನ್ನೊಳಗಂಡ ಲಕೋಟೆಯ ಮೇಲೆ ಹುದ್ದೆಯ ವಿವರಗಳನ್ನು ನಮೂದಿಸಿ ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವ ವಿಳಾಸ; ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು 56001.

ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ಮೂಲ ಪ್ರಮಾಣ ಪತ್ರಗಳನ್ನು ಮತ್ತು ಅನುಭವದ ಪ್ರಮಾಣ ಪತ್ರವನ್ನು ಸ್ಕ್ಯಾನ್‌ ಮಾಡಿ ಕಳಿಸಬೇಕು. ಇ-ಮೇಲ್ ವಿಳಾಸ [email protected] 17/5/2021 ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಅರ್ಹತೆಯಳ್ಳ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್ ಮಾಡಿ ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ ಆಗಮಿಸುವವರಿಗೆ ಯಾವುದೇ ಪ್ರವಾಸ, ದಿನ ಭತ್ಯ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ
raitamitra.karnataka.gov.in

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+