91 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸಿಎಸ್‌ಜಿ
ಬೆಂಗಳೂರು, ಮೇ 18; ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಂನ್ಸ್ (ಸಿಎಸ್‌ಜಿ) ಕರ್ನಾಟಕ 91 ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು 30 ಜೂನ್ 2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಸಿಎಸ್‌ಜಿ ಕರ್ನಾಟಕ ಸಾಫ್ಟ್‌ವೇರ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಲೀಡ್, ಬ್ಯುಸಿನೆಸ್ ಅನಾಲಿಸ್ಟ್, ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್, ಟೆಸ್ಟ್ ಲೀಡ್, ಟೆಸ್ಟ್ ಇಂಜಿನಿಯರ್ ಸೇರಿದಂತೆ 91 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಬಿ.ಇ/ ಬಿ.ಟೆಕ್/ ಎಂಸಿಎ/ ಎಂಬಿಎ/ ಎಂ.ಎಸ್‌ಸಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಎಸ್‌ಜಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಜೂನ್ 30, 2021ರೊಳಗೆ ಸಲ್ಲಿಕೆ ಮಾಡಬಹುದು. ಅರ್ಜಿಗಳನ್ನು ಸಲ್ಲಿಸಲು ವಿಳಾಸ [email protected]
ಆಸಕ್ತರು ಹುದ್ದೆಗಳ ಸಂಖ್ಯೆ, ವಯೋಮಿತಿ, ವೇತನ, ವಿದ್ಯಾರ್ಹತೆ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು csg.karnataka.gov.in












Click it and Unblock the Notifications