ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಮಾರ್ಚ್ 05: ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 5/4/2021 ಕೊನೆಯ ದಿನವಾಗಿದೆ. ಖುದ್ದಾಗಿ/ ಅಂಚೆ ಮೂಲಕ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಹೆಚ್ಪಿಸಿಎಲ್ ನೇಮಕಾತಿ; ಏ.15ರೊಳಗೆ ಅರ್ಜಿ ಹಾಕಿ
ಲೆಕ್ಕಿಗರು 5, ಪ್ರಥಮ ದರ್ಜೆ ಗುಮಾಸ್ತರು 10, ವಿಕ್ರಯ ಸಹಾಯಕರು 10, ಬೆರಳಚ್ಚುಗಾರರು 8, ಜವಾನರು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಮಾ.30ರೊಳಗೆ ಅರ್ಜಿ ಹಾಕಿ
ವಯೋಮಿತಿ; ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ತುಮಕೂರು ಕೋರ್ಟ್ನಲ್ಲಿ ಕೆಲಸ ಖಾಲಿ ಇದೆ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38, ಪ.ಜಾ/ ಪ.ಪಂ/ ಪ್ರವರ್ಗ-1 40 ವರ್ಷಗಳನ್ನು ಮೀರಿರಬಾರದು.
ಮಾಜಿ ಸೈನಿಕರಿಗೆ ಅವರು ಸೇನೆಯಲ್ಲಿ ಸಲ್ಲಿಸಿದ ಅವಧಿ ಅಥವ ಗರಿಷ್ಠ 10 ವರ್ಷಗಳು ಇದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಂಗವಿಕಲರಿಗೆ ಮತ್ತು ವಿಧವೆಯರಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಸಂಜಿತ ವೇತನ ಆಧಾರದಲ್ಲಿ ನಿಗದಿತ ವಯೋಮಿತಿಯೊಳಗೆ ಸೇರಿ ಕಾರ್ಯ ನಿರ್ವಹಿಸುತ್ತಿರುವವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ; ಪ.ಜಾತಿ/ ಪ.ಪಂ/ ಪ್ರ.ವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500 + ಅಂಚೆ ಶುಲ್ಕ ರೂ. 30 ಪ್ರತ್ಯೇಕ. ಇತರೆ ವರ್ಗದ ಅಭ್ಯರ್ಥಿಗಳಿಗೆ 1000 + ಅಂಚೆ ಕಚೇರಿ ಶುಲ್ಕ ರೂ. 30 ಪ್ರತ್ಯೇಕ.
ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಅಂತಹ ಅಭ್ಯರ್ಥಿಗಳು ಒಂದೇ ನೋಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ, ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 6364818873 ಸಂಖ್ಯೆಗೆ (ಬೆಳಗ್ಗೆ 10 ರಿಂದ 6 ಗಂಟೆಯ ತನಕ ಮಾತ್ರ ಕರೆ ಮಾಡಬಹುದು).
ನೇಮಕಾತಿ ಆದೇಶ ಮತ್ತು ಅರ್ಜಿ ಸಲ್ಲಿಸಲು ವಿಳಾಸ