ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಆಗಸ್ಟ್ 21 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31, 2018 ಕೊನೆಯ ದಿನವಾಗಿದೆ.
ಪ್ರಾಜೆಕ್ಟ್ ಕನ್ಸಲ್‌ಟೆಂಟ್ 1, ಪ್ರಾಜೆಕ್ಟ್ ಕೋ ಆರ್ಡಿನೇಟರ್ 3, ಪ್ರಾಜೆಕ್ಟ್ ಅಸಿಸ್ಟೆಂಟ್ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಕೆಲಸ ಮಾಡಬೇಕಿದೆ.
ಪ್ರಾಜೆಕ್ಟ್ ಕನ್ಸಲ್‌ಟೆಂಟ್, ಪ್ರಾಜೆಕ್ಟ್ ಕೋ ಆರ್ಡಿನೇಟರ್ ಹುದ್ದೆಗೆ ನಿರ್ವಹಣೆ, ಸಾಮಾಜಿ ಕಾರ್ಯ, ಸಮಾಜಶಾಸ್ತ್ರ ಸಾರ್ವಜನಿಕ ಆಡಳಿತ, ರಾಜಕೀಯ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ : ಪ್ರಾಜೆಕ್ಟ್ ಕನ್ಸಲ್‌ಟೆಂಟ್ ಹುದ್ದೆಗೆ ಗರಿಷ್ಟ 45 ವರ್ಷ, ಪ್ರಾಜೆಕ್ಟ್ ಕೋ ಆರ್ಡಿನೇಟರ್ ಹುದ್ದೆಗೆ 40 ವರ್ಷ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ 38 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ
ಸದಸ್ಯ ಕಾರ್ಯದರ್ಶಿ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ನ್ಯಾಯದೇಗುಲ
1ನೇ ಮಹಡಿ
ಸಿದ್ದಯ್ಯ ರಸ್ತೆ
ಬೆಂಗಳೂರು 560027 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications