ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 13 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 26/2/2020 ಕೊನೆಯ ದಿನವಾಗಿದೆ.

ಪ್ರಧಾನ ವ್ಯವಸ್ಥಾಪಕರು 1, ಕಿರಿಯ ಸಹಾಯಕರು 26, ವಾಹನ ಚಾಲಕರು 2, ಅಟೆಂಡರ್ 12 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; 54 ಹುದ್ದೆಗಳಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ನೇಮಕಾತಿ; 54 ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ/2ಬಿ/3ಎ/3ಬಿ ವರ್ಗಕ್ಕೆ 38 ವರ್ಷಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

Apply For Various Post In Kodagu District Co Operative Bank

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿಯನ್ನು ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; ಮಹತ್ವದ ಬದಲಾವಣೆ ಕೆಪಿಎಸ್‌ಸಿ ನೇಮಕಾತಿ; ಮಹತ್ವದ ಬದಲಾವಣೆ

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 1500 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಮಹಿಳೆಯರು, ಅಂಗವಿಕಲರು 1000 ರೂ. ಅರ್ಜಿ ಶುಲ್ಕ (ಅಂಚೆ ವೆಚ್ಚ ಪ್ರತ್ಯೇಕ) ವನ್ನು ಸ್ಥಳೀಯ ಅಂಚೆ ಕಚೇರಿಯಲ್ಲಿ ಪಾವತಿ ಮಾಡಿ ಚಲನ್‌ ಅನ್ನು ಆನ್‌ಲೈನ್ ಮೂಲಕ ಅಪ್‌ ಲೋಡ್ ಮಾಡಬೇಕು.

ನೇಮಕಗೊಂಡ ಅಭ್ಯರ್ಥಿಗಳ ಪರೀಕ್ಷಣಾವಧಿ ಎರಡು ವರ್ಷಗಳು ಆಗಿರುತ್ತದೆ. ಇದನ್ನು ವಿಸ್ತರಣೆ ಮಾಡುವ ಅಧಿಕಾರ ಬ್ಯಾಂಕ್ ಆಡಳಿತ ಮಂಡಳಿ ಹೊಂದಿದೆ. ನೇಮಕಾತಿ ಪ್ರಕ್ರಿಯೆಯನ್ನು ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸುವ ಅಥವ ಮುಂದೂಡುವ ಅಧಿಕಾರವನ್ನು ಬ್ಯಾಂಕ್ ಹೊಂದಿದೆ.

ಅಭ್ಯರ್ಥಿಗಳ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

English summary
Kodagu District Co Operative Central Bank Ltd invited application for the post of assistant manager, driver and attender. Candidates can apply through online till February 26/2/2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X