ವಿವಿಧ ಹುದ್ದೆಗೆ ಅರ್ಜಿ ಕರೆದ ಕೊಡಗು ಜಿಲ್ಲಾ ಪಂಚಾಯತಿ
ಕೊಡಗು, ಮಾರ್ಚ್ 30; ಕೊಡಗು ಜಿಲ್ಲಾ ಪಂಚಾಯಿತಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಅಲ್ಲಿಯೇ ಸಲ್ಲಿಸಬೇಕಿದೆ.
ಜಿಲ್ಲಾ ಐ. ಇ. ಸಿ. ಸಂಯೋಜಕರು 1, ತಾಲೂಕು ಐ. ಇ. ಸಿ. ಸಂಯೋಜಕರು 2, ತಾಂತ್ರಿಕ ಸಹಾಯಕರು (ಟಿಎಫ್‌ಎ) (ಅರಣ್ಯ), ತಾಂತ್ರಿಕ ಸಹಾಯಕರು (ಟಿಎಎಚ್) (ತೋಟಗಾರಿಕೆ) ಮತ್ತು ಬೇರ್ ಫುಟ್ ಟೆಕ್ನಿಷಿಯನ್ 7 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕೊಡಗು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪಡೆದು, ಅಲ್ಲಿಯೇ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವವರು 100 ರೂ. ಅರ್ಜಿ ಶುಲ್ಕವನ್ನು ಸಹ ಪಾವತಿ ಮಾಡಬೇಕು.
ದಾಖಲೆಗಳ ಪರಿಶೀಲನೆ 16/4/2021ರಂದು ನಡೆಯಲಿದೆ. ಅರ್ಜಿಗಳನ್ನು ಸ್ವೀಕರಿಸುವ ಪ್ರಾಧಿಕಾರ ಮೇ ಮೇಘ ಸರ್ವಿಸಸ್ಸ್ ಪ್ರೈವೇಟ್ ಲಿಮಿಟೆಡ್, ಪ್ಲಾಟ್ ನಂಬರ್ 659, ಕೀರ್ತಿ ನಗರ್, ವಿಜಯಪುರ.
ಆಸಕ್ತ ಅಭ್ಯರ್ಥಿಗಳು ಹುದ್ದೆ, ವಿವರ, ವೇತನ ಸೇರಿದಂತೆ ವಿವರಗಳನ್ನು ಪಡೆಯಲು 08272-228901 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications