ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಮೈಸೂರು, ಫೆಬ್ರವರಿ 21; ಮೈಸೂರು ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 21ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಶೀಘ್ರಲಿಪಿಗಾರರು 16, ಬೆರಳಚ್ಚು ನಕಲುಗಾರರು 4, ಆದೇಶ ಜಾರಿಕಾರರು 17 ಹಾಗೂ ಬೆರಳಚ್ಚುಗಾರ 10 ಹುದ್ದೆಗೆ ಈಗಾಗಲೇ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ಪ್ರಾರಂಭದ ಹಾಗೂ ಕೊನೆಯ ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ.

ಹೊಸ ಆದೇಶದಂತೆ ಅಭ್ಯರ್ಥಿಗಳು ಫೆಬ್ರವರಿ 20 ರಿಂದ ಮಾರ್ಚ್ 21ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಎಸ್.ಬಿ.ಐ. ಚಲನ್ ಮೂಲಕ ಶುಲ್ಕ ಪಾವತಿಸಲು 2021ರ ಮಾರ್ಚ್ 25ರ ವರೆಗೆ ಅವಕಾಶ ನೀಡಲಾಗಿದೆ.

Apply For Various Post In Mysuru District Court

ಈ ಹಿಂದೆ ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕದೊಳಗೆ ಅಂದರೆ 20/4/2020ರೊಳಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೊದಲು ಸಲ್ಲಿಸಿರುವ ಅರ್ಜಿಗಳು ಹಾಗೂ ಶುಲ್ಕವನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭದ ಹಾಗೂ ಕೊನೆಯ ದಿನಾಂಕಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಶಗಳು ಈಗಾಗಲೇ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆಯಲ್ಲಿರುವಂತೆ ಅನ್ವಯವಾಗಲಿವೆ ಎಂದು ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್‌ ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+