ಬೆಂಗಳೂರು: ವಿವಿಧ ಹುದ್ದೆಗಳ ಹೊರ ಗುತ್ತಿಗೆ ನೇಮಕಾತಿ, ಅರ್ಜಿ ಹಾಕಿ

ಬೆಂಗಳೂರು, ಏಪ್ರಿಲ್ 16: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿಯೊಂದಿದೆ. ವಿವಿಧ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರ ಮೇಲೆ ಭರ್ತಿ ಮಾಡಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಮೇ 2ರ ಸಂಜೆ 5.30 ಕೊನೆಯ ದಿನವಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸಲು ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

Apply For Various Post In Sakhi One Stop Centre Bengaluru

ಘಟಕ ಆಡಳಿತಾಧಿಕಾರಿಗಳು 2 ಹುದ್ದೆ, ಆಪ್ತ ಸಮಾಲೋಚಕರು 1 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು/ ಕೇಸ್ ವರ್ಕರ್ 7 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 9 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು/ ಸೆಕ್ಯೂರಿಟಿ 7 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿದ್ಯಾರ್ಹತೆ ವಿವರ: ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲ್ಯು, ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು.

ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲ್ಯು, ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು.

ಸಮಾಜ ಸೇವಾ ಕಾರ್ಯಕರ್ತರ/ ಕೇಸ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು.

ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು. ವಿವಿದೋದ್ದೇಶ ಸ್ವಚ್ಛತಗಾರರು/ ಸೆಕ್ಯೂರಿಟಿ (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವಿವರವನ್ನು ಎಲ್ಲಾ ದಾಖಲೆಗಳೊಂದಿಗೆ ಮೇ 2ರ ಸಂಜೆಯೊಳಗೆ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080- 29578688 ಸಂಪರ್ಕಿಸಬಹುದು.

ಚಿತ್ರದುರ್ಗದಲ್ಲಿ ನೇರ ಸಂದರ್ಶನ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏಪ್ರಿಲ್ 19ರಂದು ನೇರ ನೇಮಕಾತಿಗಾಗಿ ಸಂದರ್ಶನ ಆಯೋಜನೆ ಮಾಡಲಾಗಿದೆ. ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಈ ನೇರ ನೇಮಕಾತಿಯಲ್ಲಿ 3ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನಕ್ಕೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಆಗಮಿಸಬಹುದು.

ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪುರುಷ, ಮಹಿಳಾ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ಫೋಟೋ, ವಿದ್ಯಾರ್ಹತೆಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 7022459064, 9945587060, 8105619020.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+