ವಿವಿಧ ಹುದ್ದೆಗೆ ಅರ್ಜಿ ಕರೆದ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್

ಬೆಂಗಳೂರು, ಜುಲೈ 02 : ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು 15/7/2020 ಕೊನೆಯ ದಿನವಾಗಿದೆ.

ಡೆಪ್ಯೂಟಿ ಜನರಲ್ ಮ್ಯಾನೇಜರ್ 1, ಎಕ್ಸಿಕ್ಯೂಟೀವ್ ಇಂಜಿನಿಯರ್ (ಎಲೆಕ್ಟ್ರಿಕಲ್) 1, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 3, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) 2 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಬಳಿಕ ವಿಸ್ತರಣೆ ಮಾಡುವ ಸಾಧ್ಯತೆಯೂ ಇದೆ.

Apply For Various Post In Shivamogga Smart City Limited

ನಿವೃತ್ತಿ ಸರ್ಕಾರಿ/ಪಿಎಸ್‌ಯು ಅಭ್ಯರ್ಥಿಗಳಿಗೆ 65 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಂತಿಮ ದಿನಾಂಕದ ಬಳಿಕ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದುಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ [email protected] ಇ-ಮೇಲ್ ವಿಳಾಸಕ್ಕೆ ಕಳಿಸಬೇಕು.

ಅರ್ಜಿಗಳಿಗಾಗಿ ಜನರು www.shimogacity.mrc.gov.in ಅಥವ shivamoggasmartcity.co.in ವೆಬ್‌ ಸೈಟ್‌ಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+