ವಿವಿಧ ಹುದ್ದೆಗೆ ಅರ್ಜಿ ಕರೆದ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್
ಬೆಂಗಳೂರು, ಜುಲೈ 02 : ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು 15/7/2020 ಕೊನೆಯ ದಿನವಾಗಿದೆ.
ಡೆಪ್ಯೂಟಿ ಜನರಲ್ ಮ್ಯಾನೇಜರ್ 1, ಎಕ್ಸಿಕ್ಯೂಟೀವ್ ಇಂಜಿನಿಯರ್ (ಎಲೆಕ್ಟ್ರಿಕಲ್) 1, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 3, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) 2 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
ಶಿವಮೊಗ್ಗ ; 10ನೇ ತರಗತಿ ಪಾಸ್ ಆದವರಿಗೆ ಕೆಲಸ ಖಾಲಿ ಇದೆ
ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಬಳಿಕ ವಿಸ್ತರಣೆ ಮಾಡುವ ಸಾಧ್ಯತೆಯೂ ಇದೆ.
ಕೆಪಿಎಸ್ಸಿ ನೇಮಕಾತಿ; 251 ಹುದ್ದೆಗಳಿಗೆ ಅರ್ಜಿ ಆಹ್ವಾನ
ನಿವೃತ್ತಿ ಸರ್ಕಾರಿ/ಪಿಎಸ್ಯು ಅಭ್ಯರ್ಥಿಗಳಿಗೆ 65 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಂತಿಮ ದಿನಾಂಕದ ಬಳಿಕ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದುಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ [email protected] ಇ-ಮೇಲ್ ವಿಳಾಸಕ್ಕೆ ಕಳಿಸಬೇಕು.
ಅರ್ಜಿಗಳಿಗಾಗಿ ಜನರು www.shimogacity.mrc.gov.in ಅಥವ shivamoggasmartcity.co.in ವೆಬ್ ಸೈಟ್ಗೆ ಭೇಟಿ ನೀಡಬಹುದು.