ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 31/8/2020 ಕೊನೆಯ ದಿನವಾಗಿದೆ.

Recommended Video

Israel ಒಪ್ಪಂದದ ಬಗ್ಗೆ UAE ಮೇಲೆ ದಾಳಿ ಮಾಡುವುದಾಗಿ Iran ಬೆದರಿಕೆ ಹಾಕಿದೆ | Oneindia Kannada

ಕೇಂದ್ರ ಕಚೇರಿ ಮತ್ತು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ

ದಾಖಲಾತಿ ತಜ್ಞರು 1, ಹಿರಿಯ ಭೂ ವಿಜ್ಞಾನಿ 1, ಸಮಾಲೋಚಕರು 2, ಹಿರಿಯ ಸಮಾಲೋಚಕರು 2, ಕಿರಿಯ ಸಮಾಲೋಚಕರು 1, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 5, ಸಪೋರ್ಟ್ ಇಂಜಿನಿಯರ್ 4, ಡೇಟಾ ಎಂಟ್ರಿ ಆಪರೇಟರ್ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಶ್ರೀ ಕೃಷ್ಣದೇವರಾಯ ವಿವಿ ನೇಮಕಾತಿ; 105 ಹುದ್ದೆಗಳು ಶ್ರೀ ಕೃಷ್ಣದೇವರಾಯ ವಿವಿ ನೇಮಕಾತಿ; 105 ಹುದ್ದೆಗಳು

ಜಿಲ್ಲಾ ಪಂಚಾಯತ್ ಕಚೇರಿ : ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 1, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು 7, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 2, ಮೇಲ್ವಿಚಾರಣೆ ಹಾಗೂ ಮೌಲ್ಯ ಮಾಪನ ಸಮಾಲೋಚಕರು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಐಬಿಪಿಎಸ್ ನೇಮಕಾತಿ 2020: 1167 ವಿವಿಧ ಹುದ್ದೆಗಳಿವೆ ಐಬಿಪಿಎಸ್ ನೇಮಕಾತಿ 2020: 1167 ವಿವಿಧ ಹುದ್ದೆಗಳಿವೆ

ಈ ಎಲ್ಲಾ ಹುದ್ದೆಗಳು ತಾತ್ಕಾಲಿಕ

ಈ ಎಲ್ಲಾ ಹುದ್ದೆಗಳು ತಾತ್ಕಾಲಿಕ

ಎಲ್ಲಾ ಹುದ್ದೆಗಳು ತಾತ್ಕಾಲಿಕವಾಗಿದ್ದು ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವ ಹೊರ ಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದೆ. ನಂತರ ಕಾಲಕಾಲಕ್ಕೆ ಅವರ ಕಾರ್ಯ ಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುತ್ತದೆ. ಒಂದು ತಿಂಗಳ ನೋಟಿಸ್ ಕೊಟ್ಟು ಗುತ್ತಿಗೆ ಅಂತ್ಯಗೊಳಿಸಲಾಗುತ್ತದೆ.

45 ವರ್ಷದ ವಯೋಮಿತಿ

45 ವರ್ಷದ ವಯೋಮಿತಿ

ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳನ್ನು ಮೀರಿರಬಾರದು. ಹಿರಿಯ ಸಮಾಲೋಚಕರು, ಹಿರಿಯ ಭೂ ವಿಜ್ಞಾನಿ, ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಈ ವಯೋಮಿತಿ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವ್ಯಾಸಂಗದ ವಿವರಗಳು

ವ್ಯಾಸಂಗದ ವಿವರಗಳು

ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣದ ಮುಖಾಂತರ ಪಡೆದಿದ್ದರೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಯು ಇಲಾಖೆಯ ಅಥವ ಹೊರಗುತ್ತಿಗೆ ಸಂಸ್ಥೆಯೊಂದಿಗೆ ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು. ಕರಾರು ಒಪ್ಪಂದ ಮಾಡಿಕೊಂಡ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ಮುಂದುವರೆಯಲು ಯಾವುದೇ ಹಕ್ಕು ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವುದು ಹೇಗೆ?

ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ವಯಸ್ಸು, ವಿದ್ಯಾರ್ಹತೆ ಪ್ರಮಾಣ ಪತ್ರ, ರೆಸ್ಯೂಮ್ ಲಗತ್ತಿಸಿ ಅರ್ಜಿಗಳನ್ನು ಸಲ್ಲಿಸಬೇಕು. ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ. ಎಚ್‌. ಬಿ. ಕಟ್ಟಡ, ಕಾವೇರಿ ಭವನ, ಕೆ. ಜಿ. ರಸ್ತೆ ಬೆಂಗಳೂರು 560009.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Rural drinking water and sanitation department will fill various posts under Jal Jeevan mission. Candidates can apply till 31/8/2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X