ಬೆಂಗಳೂರಲ್ಲಿ ಕೆಲಸ ಖಾಲಿ ಇದೆ: ವೇತನ 28 ರಿಂದ 34 ಸಾವಿರ ರೂ.ಗಳು
ಬೆಂಗಳೂರು, ಜೂನ್ 15: ಬೆಂಗಳೂರು ನಗರದ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 2/7/2024 ಕೊನೆಯ ದಿನವಾಗಿದೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳಿಗಳನ್ನು ಭರ್ತಿ ಮಾಡಲಾಗುತ್ತಿದೆ. ಮುಖ್ಯ ಕಾರ್ಯಾಚರಣೆ ಅಧಿಕಾರಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅವರ ಪತ್ರ ಸೂಚನೆಯಂತೆ ನೇಮಕಾತಿ ಮಾಡಲಾಗುತ್ತದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಡಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇರೆಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 2/7/2024ರಂದು ಸಂಜೆ 5.30 ಗಂಟೆಯೊಳಗೆ ಅಂಚೆ ಅಥವ ಶಾಖೆಗೆ ಖುದ್ದಾಗಿ ಸಲ್ಲಿಸಬೇಕು.
ಹುದ್ದೆಗಳು, ವಯೋಮಿತಿ, ವೇತನ ವಿವರ: ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ (1 ಹುದ್ದೆ). ವಿದ್ಯಾರ್ಹತೆ BE/B.Tech MCA (Computer Science). ವಯೋಮಿತಿ 21-40 ವರ್ಷಗಳು. ವೇತನ 34,000 ರೂ.ಗಳು.
ತಾಂತ್ರಿಕ ಸಹಾಯಕರು (2). ವಿದ್ಯಾರ್ಹತೆ BE / B.Tech Civil Engineering with Basic Computer Knowledge including use of Internet. Diploma in Civil with Basic Computer Proficiency and Knowledge including use of internet. ವಯೋಮಿತಿ 21-40 ವರ್ಷಗಳು. ವೇತನ 28,000 ಮತ್ತು 26,000 ರೂ.ಗಳು.
ತಾಂತ್ರಿಕ ಸಹಾಯಕರು (ಅರಣ್ಯ) 1 ಹುದ್ದೆ. ವಿದ್ಯಾರ್ಹತೆ B.Sc (Forestry). 21-40 ವರ್ಷಗಳು. ಮಾಸಿಕ ವೇತನ 28,000 ರೂ.ಗಳು. ತಾಂತ್ರಿಕ ಸಹಾಯಕರು (ರೇಷ್ಮೆ) 1 ಹುದ್ದೆ. B.Sc (Sericulture) ವಿದ್ಯಾರ್ಹತೆ. ವಯೋಮಿತಿ 21-40. ವೇತನ 28,000 ರೂ.ಗಳು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://zpbengaluruurban.karnataka.gov.in ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು 560070.
ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080-26716169 ಸಂಪರ್ಕಿಸಬಹುದಾಗಿದೆ.












Click it and Unblock the Notifications