ಕೊಡಗು; ಕೆಲಸ ಖಾಲಿ ಇದೆ, ಜ.17ಕ್ಕೆ ನೇರ ಸಂದರ್ಶನ

ಮಡಿಕೇರಿ, ಜನವರಿ 05: ಕೊಡಗು ಜಿಲ್ಲೆಯಲ್ಲಿ 'ಯುವ ಸ್ಪಂದನ' ಯೋಜನೆಯಡಿ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ನೇರ ಸಂದರ್ಶನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಬೇಕಿದೆ.

ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆ 'ಯುವ ಸ್ಪಂದನ'ವಾಗಿದೆ.

Apply For Various Post Under Yuva Spandana Program At Kodagu

ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಯ ವಿವರಗಳು; ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 21 ರಿಂದ 35 ವರ್ಷಗಳು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ 17ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08272-220986 ಹಾಗೂ 9480032712.

ಕೆಲಸ ಖಾಲಿ ಇದೆ; ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಜನವರಿ 25ರೊಳಗೆ ಸಲ್ಲಿಸಬೇಕು. ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 9 ಸಾವಿರ. ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ ಶೇ.40ಕ್ಕಿಂತ ಮೇಲ್ಪಟ್ಟು ಶೇ.75ಕ್ಕಿಂತ ಕಡಿಮೆ ಇರಬೇಕು. ವಯೋಮತಿ 18 ರಿಂದ 45 ವರ್ಷಗಳು.

ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ನಗರಸಭೆ ಮಡಿಕೇರಿ-3 ಕುಶಾಲನಗರ ಪಟ್ಟಣ ಪಂಚಾಯಿತಿ-1, ಸೋಮವಾರಪೇಟೆ ಪಟ್ಟಣ ಪಂಚಾಯಿತಿ- 1 ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ-1ಯಲ್ಲಿ ಖಾಲಿ ಇದೆ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ಮಡಿಕೇರಿ ತಾಲ್ಲೂಕಿನ ಕಡಗದಾಳು ಬಲ್ಲಮಾವಟಿ, ಬೇಂಗೂರು, ಕುಂಜಿಲ, ಕೊಣಂಜಗೇರಿ. ವಿರಾಜಪೇಟೆ ತಾಲ್ಲೂಕಿನ ದೇವರಪುರ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ಶ್ರೀಮಂಗಲ ಇಲ್ಲಿ ಹುದ್ದೆ ಖಾಲಿ ಇರುತ್ತದೆ.

ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‌ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿ ಕಚೇರಿಗೆ ಅಥವಾ ಎಂಆರ್‌ಡಬ್ಲ್ಯುಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+