• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಆಗಸ್ಟ್ 11 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಲಬುರಗಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 17ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ ಮಾಡಲು ಆಡಿಯೋಲಾಜಿಸ್ಟ್ ಹಾಗೂ ಆಡಿಯೋಮೆಟ್ರಿಕ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ

ಮೆರಿಟ್-ಕಂ-ರೋಸ್ಟರ್ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ತಿಳಿಸಿದ್ದಾರೆ.

ಕರ್ನಾಟಕ ಕೃಷಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ ಕರ್ನಾಟಕ ಕೃಷಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಆಡಿಯೋಲಾಜಿಸ್ಟ್ (1 ಹುದ್ದೆ) ಅರ್ಜಿ ಸಲ್ಲಿಸುವವರು ಆರ್.ಸಿ.ಐ. (RCI) ಪ್ರಮಾಣೀಕೃತ ಸಂಸ್ಥೆಯಿಂದ ಆಡಿಯೊಲಾಜಿ ಮತ್ತು ಸ್ಪೀಚ್ ಲಾಂಗ್ವೇಜ್ ಪ್ಯಾಥೊಲಾಜಿಯಲ್ಲಿ ಪದವಿ (BSc in Speech & Hearing) ಪಾಸಾಗಿರಬೇಕು. ಮಾಸಿಕ ವೇತನ 30,000 ರೂ.ಗಳು.

ಜೆಎನ್‌ಯುನಲ್ಲಿ ಕನ್ನಡ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ ಜೆಎನ್‌ಯುನಲ್ಲಿ ಕನ್ನಡ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಆಡಿಯೋಮೆಟ್ರಿಕ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಆರ್.ಸಿ.ಐ. (RCI) ಪ್ರಮಾಣಿಕೃತ ಸಂಸ್ಥೆಯಿಂದ 1 ವರ್ಷದ ಡಿಪ್ಲೋಮಾ ಇನ್ ಹಿಯರಿಂಗ್ ಆ್ಯಂಡ್ ಸ್ಪೀಚ್ (DHLS) ಪಾಸಾಗಿರಬೇಕು. ಮಾಸಿಕ ವೇತನ 15,000 ರೂ.ಗಳು.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಕುಟುಂಬ ಕಲ್ಯಾಣ ವಿಭಾಗದ ಕೋಣೆಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ವಿದ್ಯಾರ್ಹತೆ ಅಂಕಪಟ್ಟಿಯ ದೃಢೀಕೃತ ಪ್ರತಿ, ಅನುಭವ ಪ್ರಮಾಣ ಪತ್ರ, ಗ್ರಾಮೀಣ ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರ, 371(ಜೆ), ಯೋಜನಾ ನಿರಾಶ್ರಿತರು, ಅಂಗವಿಕಲ ಮೂಲ ಪ್ರಮಾಣಪತ್ರ ಹಾಗೂ ಭಾವಚಿತ್ರಗಳೊಂದಿಗೆ 2020ರ ಆಗಸ್ಟ್ 17ರವರೆಗೆ ಪ್ರತಿದಿನ ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆ ತನಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9449843394 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಮೇಲ್ಕಂಡ ಹುದ್ದೆಗಳು ಭರ್ತಿಯಾಗದೇ ಇದ್ದಲ್ಲಿ ಆ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಪ್ರತಿ ಶನಿವಾರ ವಾಕ್-ಇನ್ ಇಂಟರವ್ಯೂ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುವುದು.

English summary
Apply for audiologist and audiometric assistant post in Kalaburagi. Interested candidate can submit application till August 17, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X