ಬಳ್ಳಾರಿ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

ಬಳ್ಳಾರಿ, ಮೇ 5 : ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 6, 2015.

ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಮತ್ತು ಜವಾನ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವರ್ಗೀಕರಣ ಮತ್ತು ಅರ್ಜಿಯನ್ನು ಪಡೆಯಲು ನ್ಯಾಯಾಲಯದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. [ಚಿತ್ರದುರ್ಗ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ]

ಶೀಘ್ರಲಿಪಿಕಾರರು : ಒಟ್ಟು 4 ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು.

Ballari court

ಬೆರಳಚ್ಚುಗಾರರು : ಒಟ್ಟು 9 ಹುದ್ದೆಗಳು ಖಾಲಿ ಇವೆ. ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು. [ವಿಜಯಪುರ ಕಂದಾಯ ಇಲಾಖೆಯಲ್ಲಿ 38 ಹುದ್ದೆ ಖಾಲಿ ಇದೆ]

ಬೆರಳಚ್ಚು ನಕಲುಗಾರರು : ಒಟ್ಟು 6 ಹುದ್ದೆಗಳು ಖಾಲಿ ಇವೆ. ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲೂ ಕಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು.

ಆದೇಶಜಾರಿಕಾರರು : ಒಟ್ಟು 12 ಹುದ್ದೆಗಳು ಖಾಲಿ ಇವೆ. ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು. ವಾಹನ ರಹದಾರಿ ಪತ್ರ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಜವಾನರು : ಖಾಲಿ ಇರುವ ಹುದ್ದೆಗಳು 10. 7ನೇ ತರಗತಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಗೊಳಿಸಲಾಗಿದೆ.

ಅಭ್ಯರ್ಥಿಯು ತನ್ನ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ ಅದರ ಮೇಲೆ ಸಹಿ ಮಾಡಿರಬೇಕು. ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತ ಅಧಿಕಾರಿಯಿಂದ ಪಡೆದು ಅವುಗಳ ನಕಲುಗಳನ್ನು ಸ್ವಯಂ ದೃಡೀಕರಿಸಿದ ಅರ್ಜಿಯೊಂದಿಗೆ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+