ಬಿಡಿಎಯಲ್ಲಿ ಕೆಲಸ ಖಾಲಿ ಇದೆ; ಜನವರಿ 15ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಜನವರಿ 05: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15/1/2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬಿಡಿಎ ಆಡಳಿತ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿಅನುಭವಿ ಸಿಬ್ಬಂದಿ/ ಅಧಿಕಾರಿಗಳ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ನಿವೃತ್ತರಾಗಿರುವ ಶಿರಸ್ತೇದಾರರು/ ಕಂದಾಯ ನಿರೀಕ್ಷಕರು/ ವಿಷಯ ನಿರ್ವಾಹಕರುಗಳನ್ನು (ಪ್ರ. ದ. ಸ. ದರ್ಜೆ) ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು 15/1/2021ರೊಳಗೆ ತಮ್ಮ ಸ್ವ ವಿವರದ ಅರ್ಜಿಗಳನ್ನು ಅಗತ್ಯ ದಾಖಲೆಗಳ ಜೊತೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ನಿಯಮಗಳ ಪ್ರಕಾರ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಸಾರ್ವಜನಿಕ ಸಂಪರ್ಕಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು 560020. ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್ ಮೂಲಕ ಕಳಿಸಬೇಕು.
ಅರ್ಜಿಗಳನ್ನು ಸ್ವೀಕರಿಸಿದ ಬಳಿಕ ಮುಂದಿನ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications