ಬೀದರ್ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

Posted By:
Subscribe to Oneindia Kannada

ಬೀದರ್, ಫೆಬ್ರವರಿ 22 : ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಫೆಬ್ರವರಿ 29, 2016.

ಶೀಘ್ರಲಿಪಿಗಾರರು 2, ಬೆರಳಚ್ಚುಗಾರರು 2, ಬೆರಳಚ್ಚು ನಕಲುಗಾರರು 5, ಆದೇಶ ಜಾರಿಕಾರರು 11, ಜವಾನರು 13 ಸೇರಿ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಭ್ಯರ್ಥಿಗಳು ಸ್ವಂತ ಕೈ ಬರಹದಿಂದಲೇ ಭರ್ತಿ ಮಾಡಿ ಸಲ್ಲಿಸಬೇಕಾಗಿದೆ. [ಕೊಡಗು ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ]

job

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರ್ಣಗೊಳಿಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ/ಪ.ಪಂ/ಪ್ರವರ್ಗ - 1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಗೊಳಿಸಲಾಗಿದೆ. [ಕೆಪಿಎಸ್ ಸಿ : RTO ಹುದ್ದೆಯ ನೇಮಕಾತಿ 2016, ವಿವರ]

ಅರ್ಜಿ ಸಲ್ಲಿಸಬೇಕಾದ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬೀದರ್, ಬೀದರ್ ಜಿಲ್ಲೆ. ನೇಮಕಾತಿ ಅಧಿಸೂಚನೆ ಪ್ರತಿ ಮತ್ತು ಅರ್ಜಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Bidar district court invites applications for various post. February 29, 2016 last date for submit application.
Please Wait while comments are loading...