ತುಮಕೂರು : ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ
ತುಮಕೂರು, ಜೂ.15 : ತುಮಕೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜೂನ್ 20, 2015.
ಉಪ ಮಹಾ ಪ್ರಬಂಧಕರು 1, ಉಪ ವ್ಯವಸ್ಥಾಪಕರು 3, ಕಿರಿಯ ಸಹಾಯಕರು 29, ಗುಮಾಸ್ತರು/ಚಾಲಕರು 5 ಹುದ್ದೆಗಳಿವೆ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆ ದಿನಾಂಕ ಮತ್ತು ಸ್ಥಳವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. [ಬ್ಯಾಂಕ್ ವೆಬ್ ಸೈಟ್]

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು Tumkur Grain Merchants Co-operative Bank Ltd. ಹೆಸರಿನಲ್ಲಿ ಡಿಡಿ ತೆಗೆದು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ 350, ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ 250, ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ 150, ಅಟೆಂಡರ್/ಡ್ರೈವರ್ ಹುದ್ದೆಗೆ 100 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. [ನೇಮಕಾತಿ ಆದೇಶ ಓದಿ]
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಬ್ಯಾಂಕ್ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು A4 ಪೇಜ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗೆ ಡಿಡಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸೇರಿಸಿ ಜೂನ್ 20ರೊಳಗೆ ಕಳುಹಿಸಬೇಕು.
ಅರ್ಜಿಗಳನ್ನು ಕಳುಹಿಸಲು ವಿಳಾಸ : TUMKUR GRAIN MERCHANTS' CO-OPERATIVE BANK LTD., Administrative Office, B H Road, Tumkur-572103, Ph.0816-4021102,03 Fax: 0816-2255905.











Click it and Unblock the Notifications