ಬೆಂಗಳೂರು ಗ್ರಾಮಾಂತರ; ತಾಲೂಕು, ಜಿಲ್ಲಾ ಮಟ್ಟದ ಹುದ್ದೆಗಳ ಭರ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಬೆಂಗಳೂರು, ಫೆಬ್ರವರಿ 19; ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪೋಷಣ ಅಭಿಯಾನ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ಮಾರ್ಚ್ 9 ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪೋಷಣ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು 21 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 9ರೊಳಗೆ ಅಗತ್ಯ ದಾಖಲೆಗಳ ಜೊತೆ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಯಾವ-ಯಾವ ಹುದ್ದೆಗಳು; ಪೋಷಣ ಅಭಿಯಾನದಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು 1 ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಪದವಿ ಅಥವಾ ಸರ್ಟಿಫಿಕೇಶನ್/ ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಇನ್‌ಫರ್ಮೆಷನ್ ಟೆಕ್ನಾಲಜಿ. ಕಂಪ್ಯೂಟರ್ ಅಪ್ಲಿಕೇಶನ್ ನಿರ್ವಹಣೆಯಲ್ಲಿ/ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ಸ್ಥಳೀಯ ಹಾಗೂ ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರತಕ್ಕದ್ದು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಲು ಸಿದ್ದರಿರಬೇಕು ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪೋಷಣ ಅಭಿಯಾನದಡಿ ತಾಲ್ಲೂಕು ಮಟ್ಟದಲ್ಲಿ ದೇವನಹಳ್ಳಿ ಮತ್ತು ನೆಲಮಂಗಲ ತಾಲ್ಲೂಕು ಸಂಯೋಜಕರು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಹಾಕುವವರು ಪದವೀಧರರಾಗಿರಬೇಕು. ಕಂಪ್ಯೂಟರ್ ಅಪ್ಲಿಕೇಶನ್ ನಿರ್ವಹಣೆಯಲ್ಲಿ/ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ಸ್ಥಳೀಯ ಹಾಗೂ ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.

ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಮಟ್ಟದಲ್ಲಿ ಯೋಜನಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದು ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಮಾನದಂಡಗಳ ಪ್ರಕಾರ ಅರ್ಹರಿದ್ದಲ್ಲಿ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 080-29787445.












Click it and Unblock the Notifications