ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು

ಬೆಂಗಳೂರು, ಜೂನ್ 18; ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 16/8/2021 ಕೊನೆಯ ದಿನಾಂಕವಾಗಿದೆ.

32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 20/8/2021 ಕೊನೆ ದಿನ.

ಪಶುವೈದ್ಯಕೀಯ ಪರೀಕ್ಷಕರ ಹಾಗೂ ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಆಗಸ್ಟ್ 16, 2021ಕ್ಕೆ ಅನ್ವಯವಾಗುವಂತೆ 35 ವರ್ಷಗಳು.

Apply For Veterinary Assistants And Veterinary Inspectors Post In Karnataka

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷದ ವಿನಾಯಿತಿ ಇದೆ. ಪ್ರವರ್ಗ 2ಎ/ 2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷದ ವಿನಾಯಿತಿ ಇದೆ. ಮೆರಿಟ್ ಲಿಸ್ಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಎಸ್‌ಸಿ/ ಎಸ್‌ಟಿ/ ಪ್ರವರ್ಗ-1/ ಅಂಗವಿಕಲ/ ಮಾಜಿ ಸೈನಿಕರಿಗೆ 270 ರೂ,. ಸಾಮಾನ್ಯ/ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 520 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಅಂಚೆ ಕಚೇರಿ ಕರ್ತವ್ಯದ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳಿಗೆ 23,500-47,650 ರೂ. ಹಾಗೂ ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ 21,400-42,000 ರೂ. ವೇತನ ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಮುಂತಾದ ವಿವರ, ಅರ್ಜಿ ಸಲ್ಲಿಕೆ ಮಾಡಲು ವೆಬ್ ಸೈಟ್ ವಿಳಾಸ
http://ahvs.kar.nic.in/en-home.html

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+