ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; 50 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 19 : ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ.

ಒಟ್ಟು 50 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಅಂಚೆ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ಸಿಬಿಎಸ್‌ಸಿ ಅಥವ ಐಸಿಎಸ್‌ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

Apply For Village Accountant Post At Chikkamagaluru

ಅರ್ಜಿಗಳನ್ನು ಸಲ್ಲಿಸುವವರಿಗೆ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪರ್ವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷ, 2ಎ/2ಬಿ/3ಎ/3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400 ರೂ. ನಿಂದ 42,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+