ಧಾರವಾಡ : 22 ಗ್ರಾಮ ಲೆಕ್ಕಿಗ ಹುದ್ದೆಗೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 09 : ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 4/9/2019 ಕೊನೆಯ ದಿನವಾಗಿದೆ.
ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ವಿವಿಧ ಕಾರಣಗಳಿಗಾಗಿ ಖಾಲಿ ಆಗಿರುವ 22 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಅರ್ಜಿ ಸಲ್ಲಿಸುವವರು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಸಿ. ಬಿ. ಎಸ್. ಇ. ಅಥವ ಐ. ಸಿ. ಎಸ್. ಇ. ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಸಹ ಅರ್ಜಿಗಳನ್ನು ಸಲ್ಲಿಸಬಹುದು.

ವಯೋಮಿತಿ ವಿವರ : ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ-1 40 ವರ್ಷಗಳು, ಇತರೆ ಹಿಂದುಳಿದ ವರ್ಗ 38 ವರ್ಷ, ಸಾಮಾನ್ಯ ವರ್ಗಕ್ಕೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕಗಳು : ಅರ್ಜಿ ಸಲ್ಲಿಸುವವರು ನಿಗದಿತ ಶುಲ್ಕವನ್ನು ಪಾವತಿ ಮಾಡಬೇಕು. ಪ.ಜಾ/ಪ.ಪಂ/ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ/ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 200 ರೂ. ಶುಲ್ಕವಿದೆ. ಬ್ಯಾಂಕ್ ಶುಲ್ಕ ಪ್ರತ್ಯೇಕ.
ಆನ್‌ಲೈನ್/ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಚಲನ್ ಇತ್ಯಾದಿಗಳ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆನ್‌ಲೈನ್ ಮೂಲಕ ಜಮಾ ಮಾಡಬೇಕು.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಕೆ ಆರಂಭ : 5/8/2019
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ 4/9/2019
* ಶುಲ್ಕ ಪಾವತಿಗೆ ಕೊನೆ ದಿನ 5/9/2019
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications