ಬೆಳಗಾವಿ : 90 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಳಗಾವಿ, ಜುಲೈ 14 : ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 11, 2016.

ಒಟ್ಟು 90 ಹುದ್ದೆಗಳಿದ್ದು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಂಚೆ ಅಥವ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ವೇತನ ಶ್ರೇಣಿ 11,600 ರಿಂದ 21,000. [ಬೆಂಗಳೂರಿನಲ್ಲಿ ಜುಲೈ 15ರಂದು ಉದ್ಯೋಗ ಮೇಳ]

job

ದ್ವಿತೀಯ ಪಿಯುಸಿ ಅಥವ CBSE or ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ಬಳ್ಳಾರಿ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1/ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಲಭ್ಯವಾಗುವ ಚಲನ್ ಮುದ್ರಿತ ಪ್ರತಿ ತೆಗೆದುಕೊಂಡು ಖಾತೆ ನಂ 200300101013122 ಕ್ಕೆ ಯಾವುದೇ ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ಶುಲ್ಕ ಪಾವತಿ ಮಾಡಬಹುದು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಈ ಕೆಳಕಂಡ ವಯೋಮಿತಿ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪ/ಪ್ರವರ್ಗ - 1 40 ವರ್ಷಗಳು, ಹಿಂದುಳಿದ ವರ್ಗ 38, ಸಾಮಾನ್ಯ ವರ್ಗ 35 ವರ್ಷಗಳು. [ಅರ್ಜಿ ಸಲ್ಲಿಸಲು ವಿಳಾಸ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Belagavi district revenue department invites applications for recruitment of 90 village accountants post, August 8, 2016 last date for submit application.
Please Wait while comments are loading...