ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆ ಖಾಲಿ ಇದೆ

|
Google Oneindia Kannada News

Recommended Video

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ | Oneindia Kannada

ಬೆಂಗಳೂರು, ಅಕ್ಟೋಬರ್ 01 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/10/2018 ಕೊನೆಯ ದಿನವಾಗಿದೆ.

ಒಟ್ಟು 35 ಹುದ್ದೆಗಳಿದ್ದು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಬಿಎಚ್ಇಎಲ್ ನಲ್ಲಿ 320 ಹುದ್ದೆಗಳಿವೆ ಈಗಲೇ ಅರ್ಜಿ ಹಾಕಿಬಿಎಚ್ಇಎಲ್ ನಲ್ಲಿ 320 ಹುದ್ದೆಗಳಿವೆ ಈಗಲೇ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವವರು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಇ/ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಯಾವುದೇ ತತ್ಸಮಾನ ವಿದ್ಯಾರ್ಹತೆ ಪರಿಗಣನೆ ಮಾಡುವುದಿಲ್ಲ ಎಂದು ಅಧಿಸೂಚನೆ ಹೇಳಿದೆ.

Apply for village accountant post in Bengaluru Rural district

ವಯೋಮಿತಿ ವಿವರ : ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. 2ಎ/2ಬಿ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅಂಗವಿಕಲ, ವಿಧವೆ ಆಗಿದ್ದಲ್ಲಿ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಯುಪಿಎಸ್ಇ ನೇಮಕಾತಿ: 581 ಇಂಜಿನಿಯರ್ ಹುದ್ದೆಗಳಿವೆ, ಅರ್ಜಿ ಹಾಕಿಯುಪಿಎಸ್ಇ ನೇಮಕಾತಿ: 581 ಇಂಜಿನಿಯರ್ ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಜಿ ಶುಲ್ಕಗಳು : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ 100 ರೂ.. ಬ್ಯಾಂಕ್ ಚಲನ್ ಹೊರತುಪಡಿಸಿ. ಇತರೆ ಪ್ರವರ್ಗ 2ಎ/2ಬಿ/3ಎ/3ಬಿ/ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ.ಗಳು.

7 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಸಿಎಲ್7 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಸಿಎಲ್

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ನೇಮಕಾತಿ ಆದೇಶವನ್ನು ಸ್ಪಷ್ಟವಾಗಿ ಓದಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿಗಳನ್ನು ಅಪ್‌ ಲೋಡ್ ಮಾಡಿದ ಬಳಿಕ ಪೇ ಆನ್‌ಲೈನ್ ಮೂಲಕ ಇಂಟರ್‌ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿ ಮಾಡಬಹುದು. ಎಸ್‌ಬಿಐನ ಯಾವುದೇ ಶಾಖೆಯಲ್ಲಿ ಸಹ ನಗದು ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು, ನೇಮಕಾತಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

English summary
Application invited for the post of 35 village accountant in Bengaluru Rural district. Candidates can apply online before 25/10/2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X