ದಕ್ಷಿಣ ಕನ್ನಡದಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ

ಮಂಗಳೂರು, ಜುಲೈ 26 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.

ಒಟ್ಟು 35 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಅಂಚೆ ಅಥವ ಖುದ್ದಾಗಿ ಸಲ್ಲಿಸಿದರೆ ಸ್ವೀಕರಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.[KPTCL ನಲ್ಲಿ ಕೆಲಸ ಖಾಲಿ ಇದೆ]

jobs

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ CBSE ಅಥವ ISCE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ. ಜೆಓಸಿ, ಡಿಪ್ಲೊಮಾ ಇನ್ನಿತರೆ ಯಾವುದೇ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.[ಅರ್ಜಿ ಸಲ್ಲಿಸಲು ವಿಳಾಸ]

ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1 ಗರಿಷ್ಠ ವಯೋಮಿತಿ 40, 2ಎ/2ಬಿ/3ಎ/3ಬಿ 38, ಸಾಮಾನ್ಯ ವರ್ಗದವರಿಗೆ 35 ವರ್ಷಗಳು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 250 ರೂ.ಗಳು. ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗಕ್ಕೆ ರೂ.500., ಆನ್‌ಲೈನ್‌ನಲ್ಲಿ ಅರ್ಜಿ ತುಂಬಿದ ಬಳಿಕ ಸಿಗುವ ಸ್ವೀಕೃತಿ ಪತ್ರ ಮತ್ತು ದ್ವಿಪ್ರತಿ ಚಲನ್ ತೆಗೆದುಕೊಂಡು ಅರ್ಜಿ ಶುಲ್ಕದೊಂದಿಗೆ ಕಾರ್ಪೊರೇಷನ್ ಅಥವ ಐಸಿಐಸಿಐ ಬ್ಯಾಂಕ್‌ನ ಕರ್ನಾಟಕದ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿ ಮಾಡಬಹುದು. ಶುಲ್ಕ ಪಾವತಿ ಮಾಡಲು ಕೊನೆ ದಿನಾಂಕ ಆಗಸ್ಟ್ 20, 2016.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+