ದಾವಣಗೆರೆ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ದಾವಣಗೆರೆ, ಅಕ್ಟೋಬರ್ 08 : ದಾವಣಗೆರೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (village accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 4, 2015.
ಒಟ್ಟು 25 ಹುದ್ದೆಗಳಿದ್ದು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

http://davanagere.nic.in/ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಸಂಖ್ಯೆ ಮತ್ತು ಅಂಚೆ ಕಚೇರಿಯ ದ್ವಿಪ್ರತಿ ಚಲನ್ ಅನ್ನು ಪಡೆದುಕೊಂಡು ಇ-ಪೇಮೆಂಟ್ ಸೌಲಭ್ಯವಿರುವ ಯಾವುದೇ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. [ಅರ್ಜಿ ಸಲ್ಲಿಸಲು ವಿಳಾಸ]
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಇತರೆ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ನವೆಂಬರ್ 4, ಕೊನೆಯ ದಿನ.
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಸಿ/ಐಸಿಎಸ್‌ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗಕ್ಕೆ 38 ವರ್ಷ, ಪ.ಜಾ/ಪ.ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಗೊಳಿಸಲಾಗಿದೆ. [ನೇಮಕಾತಿ ಆದೇಶ ಓದಿ]












Click it and Unblock the Notifications