ಶಿವಮೊಗ್ಗ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಶಿವಮೊಗ್ಗ, ಅಕ್ಟೋಬರ್ 20 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಶಿವಮೊಗ್ಗ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 16, 2015.
ಒಟ್ಟು 90 ಹುದ್ದೆಗಳು ಖಾಲಿ ಇದ್ದು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಸಂಖ್ಯೆಯನ್ನು ಹೆಚ್ಚು ಅಥವ ಕಡಿಮೆ ಮಾಡುವ ಅಧಿಕಾರವನ್ನು ನೇಮಕಾತಿ ಪ್ರಾಧಿಕಾರ ಹೊಂದಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. [ಅರ್ಜಿ ಸಲ್ಲಿಸಲು ವಿಳಾಸ]

ವಿದ್ಯಾರ್ಹತೆ : ಕರ್ನಾಟಕ ಸರ್ಕಾರದ ಪದವಿ ಪೂರ್ಣ ಶಿಕ್ಷಣ ಇಲಾಖೆಯಿಂದ ನಡೆಸಲಾದ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನಡೆಸುವ 12ನೇ ತರಗತಿ ಪರೀಕ್ಷೆ ಅಥವ ಇಂಡಿಯನ್ ಸರ್ಟಿಫೀಕೇಟ್ ಆಫ್ ಸೆಕೆಂಡರಿ ಎಜುಕೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. [ನೇಮಕಾತಿ ಆದೇಶ ಓದಿ]
ಎರಡೂ ಶೈಕ್ಷಣಿಕ ವಿದ್ಯಾರ್ಹತೆಯನ್ನು ಅಭ್ಯರ್ಥಿಯು ನವೆಂಬರ್ 16, 2015ಕ್ಕೆ ಹೊಂದಿರಬೇಕು. ಈ ವಿದ್ಯಾರ್ಹತೆಗಳನ್ನು ಬಿಟ್ಟು ಬೇರೆ ಯಾವುದೇ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. [ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ]
ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಪರಿಶಿಷ್ಟ ಜಾತಿ/ಪ.ಪಂಗಡ/ಪ್ರವರ್ಗ - 1ರ ಅಭ್ಯರ್ಥಿಗಳಿಗೆ 40 ವರ್ಷಗಳು. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
ಅರ್ಜಿ ಶುಲ್ಕ : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ದೊರೆಯುವ ಚಲನ್ ಪ್ರತಿಯನ್ನು ತೆಗೆದುಕೊಂಡು ಅರ್ಜಿ ಶುಲ್ಕವನ್ನು ಕೆನರಾ ಬ್ಯಾಂಕ್‌ನ ಯಾವುದೇ ಶಾಖೆಯಲ್ಲಿ ಪಾವತಿ ಮಾಡಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನ ನವೆಂಬರ್ 19, 2015.











Click it and Unblock the Notifications