ಉಡುಪಿ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

Posted By:
Subscribe to Oneindia Kannada

ಉಡುಪಿ, ಜೂನ್ 06 : ಉಡುಪಿ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಜೂನ್ 30, 2016.

ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. [ಉತ್ತರ ಕರ್ನಾಟಕದ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಸಿ]

jobs

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ಐಸಿಎಸ್ಇ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೆಓಸಿ, ಡಿಪ್ಲೊಮಾ ಸೇರಿದಂತೆ ಇತರ ಯಾವುದೇ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಕಂಪ್ಯೂಟರ್ ಜ್ಞಾನ ಕಡ್ಡಾಯ. [SBI ನಲ್ಲಿ ಕೆಲಸ ಖಾಲಿ ಇದೆ]

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷ. ಪ.ಜಾ/ಪ.ಪಂ/ಪ್ರವರ್ಗ - 1 40 ವರ್ಷ. 2ಎ/2ಬಿ/3ಎ/3ಬಿ 38 ವರ್ಷ. ಸಾಮಾನ್ಯ ವರ್ಗಕ್ಕೆ 35 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕಗಳು : ಪ.ಜಾ/ಪ.ಪಂ/ಪ್ರವರ್ಗ -1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 250 ರೂ., ಸಾಮಾನ್ಯ ವರ್ಗ, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 500 ರೂ.ಗಳು. http://udupi.nic.in/ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಚಲನ್ ಪಡೆದುಕೊಂಡು ಸಿಂಡಿಕೇಟ್ ಅಥವ ಕಾರ್ಪೋರೇಶನ್ ಬ್ಯಾಂಕ್‌ನಲ್ಲಿ ಶುಲ್ಕ ಪಾವತಿಸಿ, ಸ್ವೀಕೃತಿ ಪಡೆಯಬೇಕು.

ನೇಮಕಾತಿ ಆದೇಶ ಓದಲು ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Udupi district revenue department invites applications for recruitment of 12 village accountants post, June 30, 2016 last date for submit application.
Please Wait while comments are loading...