ವಿಜಯಪುರ ಕಂದಾಯ ಇಲಾಖೆಯಲ್ಲಿ 38 ಹುದ್ದೆ ಖಾಲಿ ಇದೆ

ವಿಜಯಪುರ, ಮೇ 4 : ವಿಜಯಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 38 ಗ್ರಾಮ ಲೆಕ್ಕಿಗರ (Village Accountants) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 6, 2015.

ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂಚೆ ಮೂಲಕ ಅಥವ ಖುದ್ದಾಗಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಜೂನ್ 8. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

Vijayapura

ವಿದ್ಯಾರ್ಹತೆ : ಪಿಯುಸಿ ಪಾಸಾಗಿರತಕ್ಕದ್ದು ಅಥವ ಸಿ.ಬಿ.ಎಸ್‌.ಇ/ಐ.ಸಿ.ಎಸ್‌ ಅವರು ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್‌ ಜ್ಞಾನ ಕಡ್ಡಾಯವಾಗಿದೆ.[ಅರ್ಜಿ ಸಲ್ಲಿಸಲು ವಿಳಾಸ]

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕೆಳಕಂಡಂತೆ ವಯೋಮಿತಿ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಜೂನ್ 8. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಟ್ರೇಜರಿ ಶಾಖೆ, ವಿಜಯಪುರದ ಖಾತೆ ಸಂಖ್ಯೆ 32421782822, ಐಎಫ್‌ಎಸ್ ಕೋಡ್ SBI N0007225 ಕ್ಕೆ ಶುಲ್ಕವನ್ನು ಪಾವತಿ ಮಾಡಬೇಕು.

ಸಾಮಾನ್ಯ ವರ್ಗ/ 2ಎ/2ಬಿ/3ಎ/3ಬಿ ವರ್ಗಕ್ಕೆ 400 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್ ಶುಲ್ಕ 25 ರೂ. ಪ್ರತ್ಯೇಕ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+