ಯಾದಗಿರಿಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ
ಯಾದಗಿರಿ, ಜುಲೈ 04 : ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 25, 2015.
ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 400 ರೂ.ಗಳು. ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 200 ರೂ.ಗಳು. [ನೇಮಕಾತಿ ಆದೇಶ ಓದಿ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವ ಸಿಬಿಎಸ್‌ಇ/ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು. ಈ ವಿದ್ಯಾರ್ಹತೆಯನ್ನು ಹೊರತುಪಡಿಸಿ ಉಳಿದ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ. [ಅರ್ಜಿ ಸಲ್ಲಿಸಲು ವಿಳಾಸ]
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಪರಿಶಿಷ್ಟ ಜಾತಿ/ಪ.ಪಂ/ಪ್ರವರ್ಗ - 1 ಕನಿಷ್ಠ 18 ವರ್ಷಗಳು, ಗರಿಷ್ಠ 40 ವರ್ಷಗಳು. ಪ್ರವರ್ಗ -2ಎ, 2ಬಿ, 3ಎ, 3ಬಿ 38 ವರ್ಷ. ಸಾಮಾನ್ಯ ವರ್ಗದವರಿಗೆ 35 ವರ್ಷ. [ಕೆಪಿಎಸ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ]












Click it and Unblock the Notifications